ETV Bharat / city

ಬಿ.ವೈ. ವಿಜಯೇಂದ್ರ ದೆಹಲಿ ಭೇಟಿಗೆ ಬೇರೆ ಬೇರೆ ಕಾರಣಗಳಿರುತ್ತವೆ: ಶಾಸಕ ಬೆಲ್ಲದ

author img

By

Published : Mar 13, 2022, 8:46 PM IST

ಬಿ. ವೈ. ವಿಜಯೇಂದ್ರ ಅವರ ದೆಹಲಿ ಭೇಟಿಗೆ ಬೇರೆ ಬೇರೆ ಕಾರಣಗಳಿರುತ್ತವೆ. ಪಕ್ಷದ ಅಧ್ಯಕ್ಷರು ಅವರನ್ನು ಕರೆಸಿಕೊಂಡಿದ್ದಾರೆ. ಪಕ್ಷದ ನಾಯಕರು ನಿರ್ಣಯ ತೆಗೆದುಕೊಳ್ಳುತ್ತಾರೆ, ನಾವು ಅವುಗಳನ್ನು ಪಾಲಿಸುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.

Arvind Bellad
ಶಾಸಕ ಅರವಿಂದ ಬೆಲ್ಲದ

ಧಾರವಾಡ: ಜೆ ಪಿ ನಡ್ಡಾ ನಮ್ಮ ಪಕ್ಷದ ಅಧ್ಯಕ್ಷರು. ಬಿ ವೈ ವಿಜಯೇಂದ್ರ ಅವರನ್ನು ಯಾಕೆ ಭೇಟಿ ಮಾಡಿದ್ದಾರೆ ಎಂದು ಗೊತ್ತಿಲ್ಲ. ಬೇರೆ ಬೇರೆ ಕಾರಣಕ್ಕೆ ಕೂಡ ಭೇಟಿ ಮಾಡಿರಬಹುದು ಎಂದು ವಿಜಯೇಂದ್ರ ದೆಹಲಿ ಭೇಟಿ ವಿಚಾರಕ್ಕೆ ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದ್ದಾರೆ.

ಬಿ.ವೈ. ವಿಜಯೇಂದ್ರ ದೆಹಲಿ ಭೇಟಿ ವಿಚಾರ: ಪ್ರತಿಕ್ರಿಯಿಸಿದ ಅರವಿಂದ ಬೆಲ್ಲದ

ಈ ಕುರಿತು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು ಸಚಿವನಾಗಲು ಯಾರನ್ನೂ ಭೇಟಿ ಮಾಡಲ್ಲ. ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ, ಪಕ್ಷದ ನಾಯಕರು ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಮೊನ್ನೆ ನಾಲ್ಕು ರಾಜ್ಯಗಳಲ್ಲಿ ನಾವು ಗೆದ್ದಿದ್ದೇವೆ. ಮೋದಿಯವರ ಕಾರ್ಯ ಮೆಚ್ಚಿ ಜನ ಆಶೀರ್ವಾದ ಮಾಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಮಾರ್ಗದರ್ಶನದಿಂದ ಬಿಜೆಪಿ ಗೆದ್ದಿದೆ. ಪ್ರತೀ ಚುನಾವಣೆಗೂ ನಾವು ಸರಿಯಾದ ಯೋಜನೆ ರೂಪಿಸುತ್ತೇವೆ ಎಂದರು.

ಕರ್ನಾಟಕ ಚುನಾವಣೆ ಸಹ ಹೀಗೆ ಆಗಲಿದೆ. ನಮ್ಮ ನಾಯಕರು ಕಾರ್ಯಕರ್ತರು ಸಮರ ಸನ್ನದ್ಧ ಚುನಾವಣೆ ನಂತರವೂ ನಾವು ಜನರ ನಡುವೆ ಇರುತ್ತೇವೆ. 2023ರಲ್ಲಿ ಕರ್ನಾಟಕದಲ್ಲಿ ಪ್ರಚಂಡ ಬಹುಮತದಿಂದ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ವೈನ್ ಪಾರ್ಕ್ ನಿರ್ಮಾಣಕ್ಕೆ ₹100 ಕೋಟಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಯತ್ನಾಳ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.