ETV Bharat / city

ಬಿಜೆಪಿ ಶಾಸಕರುಗಳು ತಮ್ಮ ಕ್ಷೇತ್ರಕ್ಕೆ ಹೋಗ್ತಿಲ್ಲ, ಆದಷ್ಟು ಶೀಘ್ರ ಮಂತ್ರಿಮಂಡಲ ರಚಿಸಿ : ಸಿದ್ದರಾಮಯ್ಯ ಒತ್ತಾಯ - Hubli

ಕೇರಳದಲ್ಲಿ ಹೆಚ್ಚು ಕೊರೊನಾ ಸೋಂಕು ಕಂಡು ಬರುತ್ತಿದೆ. ಗಡಿಯಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಿ ಬರುವ ಜನರನ್ನು ತಪಾಸಣೆ ಮಾಡಿ ಬಿಡಬೇಕು. ಕೋವಿಡ್​​ ಮೊದಲ ಮತ್ತು ಎರಡನೇ ಅಲೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ದೂರಿದರು..

opposition leader Siddaramaiah
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Aug 1, 2021, 7:56 PM IST

ಹುಬ್ಬಳ್ಳಿ : ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಆದಷ್ಟು ಬೇಗ ಮಂತ್ರಿಮಂಡಲ ರಚನೆ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮಂತ್ರಿಮಂಡಲ ರಚನೆಗೆ ಸಿದ್ದರಾಮಯ್ಯ ಒತ್ತಾಯ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಈ ವೇಳೆ ನಾನು ಸಹ ಪ್ರವಾಸ ಮಾಡುತ್ತಿದ್ದೇನೆ. ಆದರೆ, ಬಿಜೆಪಿಯ ಯಾವ ಎಂಎಲ್​​ಎ ಕೂಡ ಕ್ಷೇತ್ರಕ್ಕೆ ಹೋಗುತ್ತಿಲ್ಲ. ಎಲ್ಲರೂ ಬೆಂಗಳೂರಿನಲ್ಲಿ ಕುಳಿತು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇರಳದಲ್ಲಿ ಹೆಚ್ಚು ಕೊರೊನಾ ಸೋಂಕು ಕಂಡು ಬರುತ್ತಿದೆ. ಗಡಿಯಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಿ ಬರುವ ಜನರನ್ನು ತಪಾಸಣೆ ಮಾಡಿ ಬಿಡಬೇಕು. ಕೋವಿಡ್​​ ಮೊದಲ ಮತ್ತು ಎರಡನೇ ಅಲೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ದೂರಿದರು.

ಇದನ್ನೂ ಒದಿ: ಬಿಎಸ್​​​ವೈ ದೂರ ಇಟ್ಟು ಏನೂ ಮಾಡಲು ಸಾಧ್ಯವಿಲ್ಲ, ಸರ್ಕಾರಕ್ಕೆ ಸಂಕಷ್ಟ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.