ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕುರಿತು ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಚರ್ಚೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜನರು ಬಿಜೆಪಿಯ ಕಾರ್ಯವೈಖರಿಯನ್ನು ನೋಡಿದ್ದಾರೆ. ಜನರಿಗೆ ಬಿಜೆಪಿಯ ಬಗ್ಗೆ ವಿಶ್ವಾಸವಿದೆ ಎಂದರು. ಬೆಳಗಾವಿ ಲೋಕಸಭಾ ಉಪ ಚುನಾವಣೆ ಕುರಿತು ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದರು.
ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ ಎಂದು ಇದೆ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಲೋಕಸಭಾ ಟಿಕೆಟ್ ನನಗೆ ಸಿಕ್ಕರೆ ನನ್ನ ಕುಟುಂಬಸ್ಥರಿಗೆ ವಿಧಾನಸಭೆ ಟಿಕೆಟ್ಗಾಗಿ ಬೇಡಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ರೀತಿ ಯಾವುದೇ ಚರ್ಚೆಯಾಗಿಲ್ಲ. ಊಹಾಪೋಹಗಳಿಗೆ ನಾನು ಉತ್ತರ ನೀಡಲ್ಲ ಎಂದರು.
ಕೆಐಎಡಿಬಿ ದರ ಏರಿಕೆ ಕುರಿತು ಮಾತನಾಡಿ ನಿರ್ದೇಶನದ ಮೇರೆಗೆ ಪರಿಷ್ಕೃತ ದರವನ್ನು ನಿಗದಿ ಮಾಡಲಾಗಿದೆ. ಈ ಕುರಿತು ಇನ್ನೊಮ್ಮೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.