ಹುಬ್ಬಳ್ಳಿ: ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ವೃದ್ಧೆ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಗಬ್ಬೂರ್ ಬೈಪಾಸ್ ಬಳಿ ನಡೆದಿದೆ.
ಹಾವೇರಿಯಿಂದ ಧಾರವಾಡಕ್ಕೆ ತೆರಳುವ ಮುನ್ನ ಗಬ್ಬೂರ ಬೈಪಾಸ್ ಬಳಿ ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದರು. ಆದರೆ ಆಂಬ್ಯುಲೆನ್ಸ್ ಬರುವಷ್ಟರಲ್ಲಿ ವೃದ್ಧೆಯ ಪ್ರಾಣ ಹಾರಿಹೋಗಿತ್ತು. ಈ ಕುರಿತು ಹುಬ್ಬಳ್ಳಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.