ಧಾರವಾಡ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ದೂರು ದಾಖಲು ಪ್ರಕರಣ ಕುರಿತ ಧಾರವಾಡ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು ವಿಚಾರಕ್ಕೆ ಸ್ವತಃ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಜ. ೨೫ಕ್ಕೆ ನನ್ನ ಮೇಲೆ ದೂರು ದಾಖಲಾಗಿತ್ತು. ಈ ವಿಷಯವನ್ನು ಎಳೆದುಕೊಂಡು ಹೋಗಬಾರದು ಎಂದು ನಾ ಸುಮ್ಮನಿದ್ದೆ ಎಂದು ಹೊರಟ್ಟಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಪಿಯವರು ನನ್ನ ಬಳಿ ಬಂದು ಕ್ಷಮೆ ಕೇಳಿದ್ದಾರೆ. ನಾನು ಜ.೨೫ ರಂದು ಧಾರವಾಡದಲ್ಲಿ ಇರಲಿಲ್ಲ. ಈ ಹಿಂದೆಯೂ ನನ್ನ ಮೇಲೆ ಎಸ್ಸಿ/ಎಸ್ಟಿ ದೂರು ಕೂಡ ಇಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು. ನಾನು ಬೆಂಗಳೂರಿನಲ್ಲಿ ಇದ್ದರು ನನ್ನ ಮೇಲೆ ಅಟ್ರಾಸಿಟಿ ದೂರು ಕೊಟ್ಟಿದ್ದರು. ಸದನದಲ್ಲಿಯೂ ಬಜೆಟ್ ವಿಚಾರ ಚರ್ಚಿಸುವಾಗ ಕೆಲ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಿದರು. ನಾನು ಸದನದಲ್ಲಿದ್ದೆ. 10 ನಿಮಿಷದ ಬಳಿಕ ನಾನು ತೆರಳಿರುವುದಾಗಿ ಹೇಳಿದ್ದಾರೆ ಎಂದರು.
ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ತಳಮಟ್ಟದ ಅಧಿಕಾರಿಗಳನ್ನು ಬಲಿಪಶು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸಣ್ಣ ಅಧಿಕಾರಿಗಳು ಕ್ರಮಕೈಗೊಂಡಿರುವ ಸಾಧ್ಯತೆ ಇದ್ದು, ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತನಾಡುತ್ತೇನೆ. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದು ಇದೇ ವೇಳೆ ಸಭಾಪತಿ ಹೊರಟ್ಟಿ ತಿಳಿಸಿದರು.
ಓದಿ : ಬಜೆಟ್ ಅಧಿವೇಶನದಲ್ಲಿ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ