ETV Bharat / city

ಯೋಗೀಶ್​ಗೌಡ ಹತ್ಯೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್​ ನಾಯಕನ ವಿಚಾರಣೆ

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ಗೌಡ ಕೊಲೆ ಪ್ರಕರಣದ ವಿಚಾರಣೆಯನ್ನು ಕೇಂದ್ರ ಅಪರಾಧ ದಳ ( ಸಿಬಿಐ)ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಜಿಲ್ಲಾಧ್ಯಕ್ಷರನ್ನು ವಿಚಾರಣೆಗೊಳಪಡಿಸಿದೆ.

nagaraj gowri
ನಾಗರಾಜ್​ ಗೌರಿ
author img

By

Published : May 11, 2020, 3:53 PM IST

ಹುಬ್ಬಳ್ಳಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​​ಗೌಡ ಕೊಲೆ ಪ್ರಕರಣ ತನಿಖೆಯನ್ನು ಸಿಬಿಐ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ‌ ಕಾಂಗ್ರೆಸ್ ನಾಯಕ ನಾಗರಾಜ್ ಗೌರಿಯನ್ನು ಸಿಬಿಐ ವಿಚಾರಣೆ ನಡೆಸಿದೆ.‌

ಯೋಗೀಶ್​​ಗೌಡ ಅವರ ಪತ್ನಿ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ ಹಿನ್ನೆಲೆ ಜಿಲ್ಲಾ ಪಂಚಾಯತ್​​ ಸದಸ್ಯ ಶಿವಾನಂದ ಕರಿಗಾರ ಅವರು ನನ್ನ ಬಳಿ ಕರೆದುಕೊಂಡು ಬಂದಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ನನ್ನನ್ನು ವಿಚಾರಣೆ ನಡೆಸಿದೆ ಎಂದು ಕೆಪಿಸಿಸಿ ಧಾರವಾಡ ಜಿಲ್ಲಾ ಕಾರ್ಯದರ್ಶಿ ನಾಗರಾಜ ಗೌರಿ ಸ್ಪಷ್ಟಪಡಿಸಿದ್ದಾರೆ.

ಯೋಗೀಶ್​​ಗೌಡ ಪತ್ನಿ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷ ಸೇರುವ ಅಭಿಲಾಷೆಯಿಂದ ಶಿವಾನಂದ ಕರಿಗಾರ ಅವರನ್ನು ಸಂಪರ್ಕಿಸಿದ್ದರು. ಇದೇ ಸಂದರ್ಭದಲ್ಲಿ ಶಿವಾನಂದ ಕರಿಗಾರ ಅವರು ನಮ್ಮ ಬಳಿ ಕರೆದುಕೊಂಡು ಬಂದಿದ್ದರು. ಆಗ ನಾನು ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ತಿಳಿಸಿದ್ದೆ. ಆಗ ವಿನಯ್​​ ಕುಲಕರ್ಣಿ ಅವರು ಇಂತಹ ವಿಷಯಗಳನ್ನು ನಮ್ಮ ಬಳಿ ತರಬೇಡಿ ಎಂದಿದ್ದರು. ಈ ನಿಟ್ಟಿನಲ್ಲಿ ನಾನು ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಕ್ಕಕ್ಕೆ ಸೇರ್ಪಡೆಗೊಳ್ಳಲು ತಿಳಿಸಿದೆ. ಅದೇ ರೀತಿ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಎಂದ ಅವರು, ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆ ನಡೆಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.