ಹುಬ್ಬಳ್ಳಿ : ಲಿಂಗೈಕ್ಯ ತೋಂಟದಾರ್ಯ ಸಿದ್ದಲಿಂಗ ಶ್ರೀಗಳ ಹೆಸರಿನಲ್ಲಿ ಭಾವೈಕ್ಯತೆ ದಿನವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು, ಬಹಳ ನೋವಿನ ಸಂಗತಿಯಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿವಸ ಸಿಎಂ ಅವರು ಗದಗನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದು ಆಘಾತಕಾರಿ ವಿಷಯವಾಗಿದೆ. ಭಾವೈಕ್ಯತೆಯ ಹೆಸರಾಗಿದ್ದ ಶಿರಹಟ್ಟಿ ಪರಂಪರೆಯನ್ನು ಸಿಎಂ ತಿಳಿದುಕೊಂಡಿಲ್ಲ. ಯಾವುದೋ ಒತ್ತಡಕ್ಕೆ ಮಣಿದು ಈ ನಿರ್ಧಾರ ಘೋಷಿರುವುದು ಸರಿಯಲ್ಲ ಎಂದರು.
ಎರಡು ವರ್ಷದ ಹಿಂದೆ ವೀರಶೈವ, ಲಿಂಗಾಯತ ಸಮುದಾಯ ಎರಡು ಭಾಗ ಎಂದು ಹೇಳುತ್ತಿದ್ದರು. ಆದರೆ, ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದವರನ್ನು ನೀವು ಹೇಗೆ ಭಾವೈಕ್ಯತೆ ಮೂರ್ತಿ ಅಂತಾ ಹೇಳುತ್ತೀರಿ. ನೀವು ನೀಡಿದ ಹೇಳಿಕೆ ನಮ್ಮ ಸಮಾಜಕ್ಕೆ ಕೊಡಲಿ ಪೆಟ್ಟು ಕೊಟ್ಟಂತಿದೆ. ಹೀಗಾಗಿ, ಈ ಹೇಳಿಕೆಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ: ಬೆಳಗಾವಿ: ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ವ್ಯಕ್ತಿಯ ಕೊಲೆ