ಹುಬ್ಬಳ್ಳಿ: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ 'ಹುಟ್ಟಿದರೇ ಕನ್ನಡ ನಾಡಲ್ ಹುಟ್ಟಬೇಕು' ಹಾಡು ಹಾಡಿ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕ್ಷಮತಾ ಸಂಸ್ಥೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಮೊದಲ ದಿನ ಖ್ಯಾತ ಗಾಯಕ ವಿಜಯ ಪ್ರಕಾಶ್, ಅರ್ಚನಾ ಉಡುಪಾ ಹಾಗೂ ಅವರ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಡಾ. ರಾಜ್ಕುಮಾರ್ ಅಭಿನಯದ ಆಕಸ್ಮಿಕ ಸಿನಿಮಾದ ಹುಟ್ಟಿದರೇ ಕನ್ನಡ ನಾಡಲ್ ಹುಟ್ಟಬೇಕು ಹಾಡನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆದರು.