ಧಾರವಾಡ: ಭಾರಿ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹದಿಂದ ಶಾಲೆಗಳಿಗೆ ಘೋಷಿಸಲಾದ ರಜೆ ಸರಿದೂಗಿಸಲು ಶನಿವಾರ, ಭಾನುವಾರವೂ ಪೂರ್ಣ ತರಗತಿಗಳನ್ನು ನಡೆಸುವಂತೆ ಸಾರ್ವಜನಿಕ ಶಿಕ್ಷಣಾ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾದ್ಯಂತ ಮಳೆಯಿಂದಾಗಿ ಆಗಸ್ಟ್ 6ರಿಂದ 10ರವರೆಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶಕ್ಕೆ 5 ದಿನಗಳ ರಜೆಯ ತರಗತಿಗಳನ್ನು ಸರಿದೂಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಆಗಸ್ಟ್ 17ರಿಂದ 31ರವರೆಗೂ ಬರುವ ಶನಿವಾರ, ಭಾನುವಾರ ದಿನಗಳಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಸಾರ್ವಜನಿಕ ಶಿಕ್ಷಣಾ ಇಲಾಖೆ ಉಪ ನಿರ್ದೇಶಕರು ಸೂಚಿಸಿದ್ದಾರೆ.