ಧಾರವಾಡ: ಮಳೆ ಕಡಿಮೆ ಪ್ರಮಾಣದಲ್ಲಿ ಆಗುತ್ತಿರುವ ಕಾರಣ ಈಗಾಗಲೇ ಮೋಡ ಬಿತ್ತನೆ ಮಾಡೋದಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಸಚಿವರು ಈ ಬಗ್ಗೆ ಮಾತನಾಡಿದ್ದಾರೆ. ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಸೆಂಟರ್ ಮಾಡಿದ್ದೇವೆ ಎಂದರು. ಈ ವೇಳೆಗಾಗಲೇ ಉತ್ತಮ ಮಳೆಯಾಗಬೇಕಿತ್ತು. ಆದರೆ, ಗುಜರಾತ್ನಲ್ಲಿ ಸೈಕ್ಲೋನ್ ಸಮಸ್ಯೆಯಿಂದಾಗಿ ಮಳೆ ಮುಂಗಾರು ತಡವಾಗಿದೆ. ಹಾಗಾಗಿ ಆದಷ್ಟು ಬೇಗ ಮೋಡ ಬಿತ್ತನೆ ಮಾಡುತ್ತೇವೆ ಎಂದು ರೈತರಿಗೆ ಭರವಸೆ ನೀಡಿದರು.