ಹುಬ್ಬಳ್ಳಿ: ನೂತನ ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಕನ್ನಡ ತಂತ್ರಾಂಶ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯ ಅಶೋಕ ನಗರದ ಕನ್ನಡ ಭವನದಲ್ಲಿ 'ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ' ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ವಿಶ್ವದ ಎಲ್ಲಾ ಭಾಷೆಗಳಲ್ಲಿ ಕನ್ನಡ ಅಗ್ರಗಣ್ಯ ಸ್ಥಾನದಲ್ಲಿದೆ. ಮಾತೃಭಾಷೆಯ ಅಭಿವೃದ್ಧಿಗೆ ನಮ್ಮ ಸರ್ಕಾದ ಬದ್ಧವಾಗಿದೆ ಎಂದು ತಿಳಿಸಿದರು.
ಇದೇ ವೇಳೆ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಧ್ವನಿಗೂಡಿಸಿದ ಸಿಎಂ, ಕೈಯಲ್ಲಿ ಕನ್ನಡ ಭಾವುಟ ಹಿಡಿದು ಸಂಭ್ರಮಿಸಿದರು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರು ಕೂಡಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಒಟ್ಟಾಗಿ ಹಾಡುವ ಮೂಲಕ ಗೀತ ಗಾಯನ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.
ಇದನ್ನೂ ಓದಿ: 'ಲಕ್ಷಕಂಠಗಳಲ್ಲಿ' ಕನ್ನಡ ಗೀತಗಾಯನ.. 'ಕನ್ನಡಕ್ಕಾಗಿ ನಾವು' ಅಭಿಯಾನದಡಿ 5 ಲಕ್ಷ ಜನರಿಂದ ಗಾಯನ