ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಬ್ಬಳ್ಳಿಯ ನಿವಾಸದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದರು.
ನಿನ್ನೆ(ಗುರುವಾರ) ರಾತ್ರಿ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ್ದ ಸಿಎಂ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.
ಕಳೆದ ನಾಲ್ಕೈದು ದಿನಗಳಿಂದ ಬೆಳಗಾವಿ ಅಧಿವೇಶನ ನಡೆಯುತ್ತಿದೆ. ಉತ್ತರಕರ್ನಾಟಕ ಭಾಗದ ಸಮಸ್ಯೆ ಹಾಗೂ ಮಹದಾಯಿ ಕಾಮಗಾರಿ ಆರಂಭದ ಬಗ್ಗೆ ಯಾವುದೇ ಚರ್ಚೆ ಆರಂಭವಾಗಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ. ಸ್ಥಳೀಯರಿಂದ ಮನವಿ ಸ್ವೀಕರಿಸಿದ ಅವರು ಅಧಿವೇಶನದಲ್ಲಿ ಭಾಗಿಯಾಗಲು ಬೆಳಗಾವಿಯತ್ತ ಪ್ರಯಾಣ ಬೆಳೆಸಿದರು.
ಇದನ್ನೂ ಓದಿ: EWISR ಪಟ್ಟಿ ರಿಲೀಸ್ : 10ರಲ್ಲಿ ಬೆಂಗಳೂರಿನ ಆರು ಅಂತಾರಾಷ್ಟ್ರೀಯ ಶಾಲೆಗಳಿಗೆ ಅಗ್ರಸ್ಥಾನ!