ಹುಬ್ಬಳ್ಳಿ: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ನಲ್ಲಿ ಚುನಾವಣೆ ಪ್ರಚಾರ ಪ್ರಾರಂಭ ಮಾಡಿದ್ದೇನೆ. ನನಗೆ ಸಂಪೂರ್ಣ ವಿಶ್ವಾಸವಿದೆ, ಈ ಎರಡೂ ಕ್ಷೇತ್ರಗಳಿಗೆ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಹಾನಗಲ್ಗೆ ಬೊಮ್ಮಾಯಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಹಾನಗಲ್ಗೆ 2,400 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇನೆ, ನೀವು ಎಷ್ಟು ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.