ಹುಬ್ಬಳ್ಳಿ : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ನಮ್ಮ ನಿರೀಕ್ಷೆಗಿಂತ ಹೆಚ್ಚಿನ ವಿಚಾರಗಳು ಹೊರ ಬೀಳುತ್ತಿವೆ. ಅಕ್ರಮದಲ್ಲಿ ಭಾಗಿಯಾದವರ ಬಂಧನಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಕ್ರಮದಲ್ಲಿ ಎಷ್ಟೇ ಪ್ರಭಾವಿ ಇರಲಿ, ಎಷ್ಟೇ ಚಾಣಾಕ್ಷ ಇದ್ದರೂ, ಬಂಧಿಸುವಂತೆ ಸೂಚಿಸಲಾಗಿದೆ. ನೇಮಕಾತಿ ನ್ಯಾಯ ಸಮ್ಮತವಾಗಿದ್ದರೆ ಜನರಿಗೆ ನ್ಯಾಯ ಸಿಗಲಿದೆ ಎಂದರು.
ಹುಬ್ಬಳ್ಳಿ ಗಲಭೆಯನ್ನ ನಾವು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಇದರ ಹಿಂದೆ ಷಡ್ಯಂತ್ರ ಇದೆ. ಪೊಲೀಸ್ ಠಾಣೆಯನ್ನೇ ಟಾರ್ಗೆಟ್ ಮಾಡಿ, ಸಂಚಿತ ದಾಳಿ ನಡೆಸಲಾಗಿದೆ. ಇದರಲ್ಲಿ ಬೇರೆ ಬೇರೆ ಶಕ್ತಿಗಳ ಕುಮ್ಮಕ್ಕಿನ ಬಗ್ಗೆ ತನಿಖೆ ನಡೆಯುತ್ತಿದೆ. ಕೆಲವೇ ದಿನದಲ್ಲಿ ಇದರ ಹಿಂದಿನ ಷಡ್ಯಂತ್ರ ಬಯಲಿಗೆ ಎಳೆಯಲಾಗುವುದು ಎಂದರು.
ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಗಲಭೆಯಲ್ಲಿ ಯಾವ ರೀತಿ ಕ್ರಮ ಆಗಿದೆಯೋ ಇಲ್ಲಿಯೂ ಕ್ರಮ ಆಗಲಿದೆ. ಕಠಿಣ ಕ್ರಮ ಎಂದರೆ ಹಲವಾರು ಕ್ರಮಗಳಿವೆ. ಕಠಿಣ ಕ್ರಮದ ವಿಚಾರದಲ್ಲಿ ಕರ್ನಾಟಕ ಮಾದರಿ ಎಂದರು. ಇನ್ನು ಸಂಪುಟ ವಿಸ್ತರಣೆ ಬಗ್ಗೆ ನಾನು ಹೇಳಲು ಆಗುವುದಿಲ್ಲ. ಅದನ್ನು ಪಕ್ಷದ ವರಿಷ್ಠರ ಜತೆ ಚರ್ಚೆ ಮಾಡಿದ ಬಳಿಕ ನಿರ್ಧಾರ ಹೊರ ಬರಲಿದೆ ಎಂದರು.
ಇದನ್ನೂ ಓದಿ: ಹುಬ್ಬಳ್ಳಿಯ ಗಲಭೆ ಪ್ರಕರಣ : ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆ ನಿಷೇಧಾಜ್ಞೆ ವಾಪಸ್