ಹುಬ್ಬಳ್ಳಿ: ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಜಿನೋಮಿಕ್ ಸೀಕ್ವೆನ್ಸ್ ಟೆಸ್ಟಿಂಗ್ ಲ್ಯಾಬ್ಗಳನ್ನು ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಪರಿಣತರ ಜೊತೆ ಚರ್ಚಿಸಲು ಈಗಾಗಲೇ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇವೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಆಗಮಿಸಿರುವ ಸಿಎಂ ತಮ್ಮ ನಿವಾಸದ ಬಳಿ ಮಾತನಾಡಿ ಎಲ್ಲಾ ಕೊರೊನಾ ಕೇಸ್ಗಳ ಜಿನೋಮ್ ಸೀಕ್ವೆನ್ಸ್ ಟೆಸ್ಟ್ ಮಾಡ್ತಿದ್ದೇವೆ. ಆದಷ್ಟು ಬೇಗ ವರದಿ ಬರುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದರು.
'ಕವಟಗಿಮಠ ಗೆಲುವು ನಿಶ್ಚಿತ':
ಬೆಳಗಾವಿಯಲ್ಲಿ ಸಭೆ ಇದೆ. ಪಕ್ಷದ ಶಾಸಕರು ಮತ್ತು ಮುಖಂಡರ ಸಭೆ ಕರೆದಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲೋಕೆ ಏನೆಲ್ಲಾ ಸೂಚನೆ ನೀಡಬೇಕು ಅದನ್ನು ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ. ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವು ನಿಶ್ಚಿತ. ಲಖನ್ ಜಾರಕಿಹೊಳಿ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ. ನಮಗೇನೂ ಸಂಬಂಧವಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗೆ ನಿರಾಸೆ:
ಸಿಎಂ ಬೊಮ್ಮಾಯಿವರು ಸುಳ್ಳು ಹೇಳುತ್ತಿದ್ದಾರೆ ಎಂದ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ ಸಿದ್ದರಾಮಯ್ಯ ಅವರ ಬಗ್ಗೆ ಬಹಳ ಗೌರವವಿತ್ತು. ಆದರೆ ಇತ್ತೀಚಿನ ಹೇಳಿಕೆಗಳು ನಿರಾಸೆ ತಂದಿದೆ ಎಂದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ರೇಣುಕಾಚಾರ್ಯ ಹೇಳಿಕೆಗೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಅವರು ಎಲ್ಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದು ರೇಣುಕಾಚಾರ್ಯಗೆ ಟಾಂಗ್ ನೀಡಿದ್ದಾರೆ.
ಸಿಎಂ ಮನೆಯ ಮುಂದೆಯೇ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದರ್ಶ ನಗರದ ನಿವಾಸದ ಎದುರೇ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಅಹವಾಲುಗಳನ್ನು ಸಲ್ಲಿಸಲು ನೂರಾರು ಮಂದಿ ಸ್ಥಳಕ್ಕೆ ಧಾವಿಸಿದ್ದು, ಕೆಲವರು ಮಾಸ್ಕ್ ಹಾಕಿರಲಿಲ್ಲ ಹಾಗೂ ಸಾಮಾಜಿಕ ಅಂತರ ಮಾಯವಾಗಿತ್ತು.
ಇದನ್ನೂ ಓದಿ: ಬಿಜೆಪಿಯವ್ರು ಹಣದಿಂದ ಏನ್ ಬೇಕಾದ್ರು ತೆಗೆದುಕೊಳ್ಳಬಹುದು ಎಂದುಕೊಂಡಿದ್ದಾರೆ: ಹೆಚ್ಡಿಕೆ ವಾಗ್ದಾಳಿ