ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2,100 ಕೋಟಿ ಹೊರೆಯಾಗಲಿದೆ. ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆಯಿಂದ ಬೆಲೆ ಇಳಿಕೆ ಕ್ರಮ ಜಾರಿಯಾಗಲಿದೆ ಎಂದರು.
ಜನವರಿ 26 ರಿಂದ ರಾಜ್ಯಾದ್ಯಂತ ಜನಸೇವಕ ಯೋಜನೆ ಜಾರಿಯಾಗಲಿದೆ. ಹೈಕಮಾಂಡ್ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ದೆಹಲಿಗೆ ಹೋಗಲ್ಲ. ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಶತ ದಿನ ಪೂರೈಸಿದ ಬೊಮ್ಮಾಯಿ ಸರ್ಕಾರ : ಸಂಭ್ರಮಕ್ಕೆ ಅಡ್ಡಿಯಾಗಲಿದೆಯೇ ಹಾನಗಲ್ ಸೋಲು?
ಬಿಟ್ ಕಾಯಿನ್ ಪ್ರಕರಣದ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿರುವುದರ ಸಂಬಂಧ, ಈ ಬಗ್ಗೆ ನಾನು ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ ಎಂದರು.