ETV Bharat / city

ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸುವವರ ಮೇಲೆ ಕಾನೂನು ಕ್ರಮ: ಬೊಮ್ಮಾಯಿ - ರಾಜ್ಯ ಹಣಕಾಸು ಬಜೆಟ್ ಬಗ್ಗೆ ಸಿಎಂ ಪ್ರತಿಕ್ರಿಯೆ

ಎಲ್ಲಾ ವ್ಯವಸ್ಥೆಯನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಶಾಲಾ, ಕಾಲೇಜುಗಳನ್ನು ಆರಂಭಿಸೋದು ನಮ್ಮ‌ ಮೊದಲ ಆದ್ಯತೆಯಾಗಿದೆ ಎಂದು ಸಿಎಂ ತಿಳಿಸಿದರು.

Cm bommai on hijab and budget
ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸುವರ ಮೇಲೆ ಕಾನೂನು ಕ್ರಮ: ಬೊಮ್ಮಾಯಿ
author img

By

Published : Feb 13, 2022, 11:01 AM IST

ಹುಬ್ಬಳ್ಳಿ: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸುವವರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಪ್ರಚೋದನೆ ನೀಡುವವರನ್ನು ನಮ್ಮ ಅಧಿಕಾರಿಗಳು ಗಮನಿಸುತ್ತಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಪ್ರೌಢಶಾಲೆಗಳನ್ನು ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ಹೇಳಿದರು.

ಎಲ್ಲಾ ವ್ಯವಸ್ಥೆಯನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸೋದು ನಮ್ಮ‌ ಮೊದಲ ಆದ್ಯತೆಯಾಗಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಹಿಜಾಬ್‌ ಬಗ್ಗೆ ಕುರಾನ್‌ನಲ್ಲಿ ಉಲ್ಲೇಖವಿದ್ದರೂ ಇಸ್ಲಾಂಗಿದು ಅನಿವಾರ್ಯವಲ್ಲ: ಕೇರಳ ರಾಜ್ಯಪಾಲ

ಬಜೆಟ್ ವಿಚಾರವಾಗಿ ಮಾತನಾಡಿದ ಸಿಎಂ, ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆಗೆ ಬಹಳ ನಷ್ಟ ಆಗಿದೆ. ಈ ಬಜೆಟ್​​ನಲ್ಲಿ ಅದಕ್ಕೆ ಬೂಸ್ಟ್ ಕೊಡೋ ಪ್ರಯತ್ನ ಮಾಡುತ್ತೇವೆ. ಸಮಗ್ರ ಕರ್ನಾಟಕದ ಅಭಿವೃದ್ದಿ ಚಿಂತನೆ ಇದೆ. ಆರ್ಥಿಕ‌ ಅಭಿವೃದ್ದಿ, ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.