ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣಕ್ಕೆ ಪ್ರಾದೇಶಿಕ ಸಂಪರ್ಕ ಯೋಜನೆ - ಉಡಾನ್ ಅಡಿ 'ವಿಂಗ್ಸ್ ಇಂಡಿಯಾ 2020' ಪ್ರಶಸ್ತಿ ದೊರೆತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ.
ಇಂದು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ನಿರ್ದೇಶಕ ಪ್ರಮೋದ್ ಠಾಕ್ರೆ ಅವರಿಗೆ ಸಿಎಂ ಅಭಿನಂದಿಸಿದರು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ ಅಡಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಉತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ನೀಡಿ ಗೌರವಿಸಿದೆ. ಇದನ್ನು ಕೇಂದ್ರ ಸರ್ಕಾರದ ವಿಮಾನಯಾನ ಮಂತ್ರಾಲಯವು, ಭಾರತೀಯ ವಾಣಿಜ್ಯೋದ್ಯಮ ಸಂಸ್ಥೆಯ ಸಹಯೋಗದಲ್ಲಿ ಹೈದರಾಬಾದ್‌ನ ಬೇಗಂಪೇಟೆಯಲ್ಲಿ ಮಾ.12 ರಿಂದ 15ರವರೆಗೆ ಆಯೋಜಿಸಿರುವ ಏಷ್ಯಾದ ಅತಿದೊಡ್ಡ ವಿಮಾನಯಾನ ಕುರಿತ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.