ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಪ್ರಚಂಡ ಬಹುಮತದಿಂದ ಜಯಶಾಲಿಯಾಗುತ್ತಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಅಂಬೇಡ್ಕರ್ ಜಯಂತ್ಯುತ್ಸವ ಪ್ರಯುಕ್ತವಾಗಿ ಅಂಬೇಡ್ಕರ್ ಪುತ್ಥಳಿಕೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಶೆಟ್ಟರ್, ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್ಡಿಕೆ ಪ್ರಜಾಪ್ರಭುತ್ವದ ವಿರೋಧಿಯಾಗಿ ಮಾತನಾಡುತ್ತಿದ್ದಾರೆ. ಅದು ಅವರ ಸ್ಥಾನಕ್ಕೆ ಗೌರವ ಸೂಚಕವಲ್ಲ. ಇಂತಹ ಮಾತುಗಳನ್ನಾಡುವುದನ್ನು ಕುಮಾರಸ್ವಾಮಿ ಅವರು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಇನ್ನು ಮಂಡ್ಯ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಹುಮತದಿಂದ ಆಯ್ಕೆಯಾಗುವ ಮೂಲಕ ಸಂಸದರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.