ಧಾರವಾಡ: ಮಂಗಳವಾರ ಧಾರವಾಡ ತಾಲೂಕಿನ ಹಾರೋ ಬೆಳವಡಿ ಕಬ್ಬೆನೂರ ಗ್ರಾಮದ ಬಳಿ ಚಿರತೆ ಹೆಜ್ಜೆ ಗುರುತುಗಳು ಕಾಣಿಸಿಕೊಂಡಿದ್ದು, ಇಂದು ಚಿರತೆ ಪ್ರತ್ಯಕ್ಷವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಶಿವಪ್ಪ ಉಪ್ಪಾರ ಕಬ್ಬಿನ ತೋಟದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ನೇತೃತ್ವದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯಿತು.
ಇತ್ತ ಧಾರವಾಡ ತಾಲೂಕಿನ ಹಾರೋಬೆಳವಡಿ ಕಬ್ಬೆನೂರ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ. ಈಗಾಗಲೇ ಹುಬ್ಬಳ್ಳಿ, ಕವಲಗೇರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ. ಎರಡು ಗ್ರಾಮಗಳ ಮಧ್ಯೆ ದಾಟಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಗ್ರಾಮದ ಜಮೀನೊಂದರಲ್ಲಿ ಚಿರತೆ ಹೆಜ್ಜೆ ಗುರುತುಗಳು ಮೂಡಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹೆಜ್ಜೆ ಗುರುತು ಪರಿಶೀಲಿಸಿದ್ದಾರೆ. ಹೆಜ್ಜೆ ಗುರುತು ಆಧರಿಸಿ ಚಿರತೆ ದಾಟಿರುವುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಇದರಿಂದ ಹಾರೋಬೆಳವಡಿ-ಕಬ್ಬೆನೂರ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.