ETV Bharat / city

ಹುಬ್ಬಳ್ಳಿ: ಯುವತಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿ ವಿರುದ್ಧ ದೂರು ದಾಖಲು - Hubli crime news

ಇನ್​​ಸ್ಟಾಗ್ರಾಮ್​ನಲ್ಲಿ ಹಾಕಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಫೇಸ್​ಬುಕ್, ಇನ್​​ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿ ವಿರುದ್ಧ ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್​ ಠಾಣೆ
ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್​ ಠಾಣೆ
author img

By

Published : Jan 13, 2022, 9:46 AM IST

ಹುಬ್ಬಳ್ಳಿ: ಯುವತಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದೂರು ನೀಡಿರುವ ಯುವತಿ ಇನ್​​ಸ್ಟಾಗ್ರಾಮ್​ನಲ್ಲಿ ಎರಡು ವರ್ಷಗಳಿಂದ ಖಾತೆ ಓಪನ್ ಮಾಡಿದ್ದು, ಯುವತಿಗೆ ಸೋನು ನವೀನ್​ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ಬಳಿಕ ಯುವತಿಯ ಇನ್​​ಸ್ಟಾಗ್ರಾಮ್​ನಲ್ಲಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಫೇಸ್​ಬುಕ್, ಇನ್​​ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡುತ್ತೇನೆಂದು ಹೆದರಿಸಿದ್ದಾನೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ, ಬೇರೆ ಮಹಿಳೆಯರ ನಗ್ನ ವಿಡಿಯೋ, ಫೋಟೋಗಳನ್ನು ಕಳುಹಿಸಿ ಬೆದರಿಕೆ ಹಾಕಿದ್ದು, ಕೂಡಲೇ ಆತನನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಯುವತಿ ದೂರಿನಲ್ಲಿ ಮನವಿ ಮಾಡಿದ್ದಾಳೆ.

ಓದಿ: ಕಳೆದ 24 ಗಂಟೆಗಳಲ್ಲಿ ಸುಮಾರು 2.5 ಲಕ್ಷ ಜನಕ್ಕೆ ಅಂಟಿದ ಕೊರೊನಾ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.