ETV Bharat / city

2 ತಿಂಗಳೊಳಗೆ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಸಿ: ಧಾರವಾಡ ಹೈಕೋರ್ಟ್ ಪೀಠ ಆದೇಶ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ‌ಸ್ಥಾನದ ಅಭ್ಯರ್ಥಿ ಶೇಖರ ಗೌಡ ಮಾಲಿ ಪಾಟೀಲ್ ಅರ್ಜಿ ಪುರಸ್ಕರಿಸಿದ ಧಾರವಾಡ ಹೈಕೋರ್ಟ್ 2 ತಿಂಗಳಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಿದೆ.‌‌

dharwad
ಸಾಹಿತ್ಯ ಪರಿಷತ್ ಚುನಾವಣೆ ನಡೆಸುವಂತೆ ಧಾರವಾಡ ಹೈಕೋರ್ಟ್ ಆದೇಶ
author img

By

Published : Sep 15, 2021, 8:42 PM IST

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳೊಳಗೆ ನಡೆಸುವಂತೆ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ‌ಸ್ಥಾನದ ಅಭ್ಯರ್ಥಿ ಶೇಖರ ಗೌಡ ಮಾಲಿ ಪಾಟೀಲ್ ಈ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದರು. ನಿಗದಿಯಂತೆ ಮೇ 9ಕ್ಕೆ ಚುನಾವಣೆ ನಡೆಯಬೇಕಿತ್ತು. ಕೊರೊನಾ ಹೆಚ್ಚಳ ಹಿನ್ನೆಲೆ ಚುನಾವಣೆಯನ್ನು ಮುಂದೂಡಲಾಗಿತ್ತು.

ಒಂದೂವರೆ ತಿಂಗಳ ಹಿಂದೆಯೇ‌ ಮಾಲಿ ಪಾಟೀಲ ಸರ್ಕಾರಕ್ಕೆ ಮನವಿ ಸಲ್ಲಿಸಿ ಚುನಾವಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಸರ್ಕಾರದಿಂದ ಯಾವುದೇ ಪ್ರತಿಕಿಯೆ ಬಂದಿರಲಿಲ್ಲ. ಇತ್ತೀಚೆಗೆ ಪಾಲಿಕೆ ಚುನಾವಣೆ ನಡೆದಿದ್ದು, ಎಲ್ಲ ಚುನಾವಣೆ ನಡೆಯುವಾಗ ಇದಕ್ಕೆ ಯಾಕೆ ತಡೆ ಎಂದು ಮಾಲಿ ಪಾಟೀಲ್ ಕೋರ್ಟ್‌ ಮೊರೆ ಹೋಗಿದ್ದರು.

ಮಾಲಿ ಪಾಟೀಲ್ ಅರ್ಜಿ ಪುರಸ್ಕರಿಸಿದ ಧಾರವಾಡ ಹೈಕೋರ್ಟ್ 2 ತಿಂಗಳಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಿದೆ.‌‌

ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ 22 ಮಂದಿ ಸ್ಪರ್ಧೆ: ಮೇ 9ರಂದು ಚುನಾವಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.