ETV Bharat / city

ಬುಲೆಟ್ ಬೈಕ್​ಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಬುಲೆಟ್ ಬೈಕ್​ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಕಾಂಗ್ರೆಸ್​ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

Hubli
ಬುಲೆಟ್ ಬೈಕ್​ಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
author img

By

Published : Jun 11, 2021, 1:46 PM IST

ಹುಬ್ಬಳ್ಳಿ: 100 ನಾಟ್ಔಟ್ (ತೈಲ ದರ) ಘೋಷಣೆ ಅಡಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಐದು ದಿನ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ಕರೆ ಕೊಟ್ಟಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಬುಲೆಟ್ ಬೈಕ್​ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಬುಲೆಟ್ ಬೈಕ್​ಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಳೆದ 12 ತಿಂಗಳುಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 30 ರೂಪಾಯಿಯಷ್ಟು ಹೆಚ್ಚಳವಾಗಿದೆ. ಇದೀಗ ರಾಜ್ಯಸರ್ಕಾರ ವಿದ್ಯುತ್ ದರವನ್ನೂ ಹೆಚ್ಚಿಸಿದೆ. ಪೆಟ್ರೋಲ್​ ಬೆಲೆ 100ರ ಗಡಿ ದಾಡಿದೆ. ಇದು ಅಂತಾರಾಷ್ಟ್ರೀಯ ತೈಲ ಕಂಪನಿಗಳು ಏರಿಕೆ ಮಾಡಿದ್ದರಿಂದಾಗಿಲ್ಲ. ಬದಲಾಗಿ ಮೋದಿ ಸರ್ಕಾರದ ಇಂಧನದ ಮೇಲಿನ ಕಠಿಣ ತೆರಿಗೆಯಿಂದಾಗಿ ಹೆಚ್ಚಳವಾಗಿದೆ.

ಕೊರೊನಾ ಕಾರಣದಿಂದಾಗಿ ಈಗಾಗಲೇ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಕೂಡಲೇ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಂದಿನ ಎರಡು ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ ಹೇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.