ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಕಾರ್ಯತಂತ್ರಗಳ ಕುರಿತಂತೆ ಚರ್ಚಿಸಲು ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಯಿತು.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಎಂಎಲ್ಸಿಗಳು ಭಾಗವಹಿಸಿದ್ದರು. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು ಎನ್ನಲಾಗಿದೆ.
ಬಳಿಕ ಸುದ್ದಿಗೊಷ್ಠಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಹುಬ್ಬಳ್ಳಿ ಕರ್ನಾಟಕ ಕಾಂಗ್ರೆಸ್ ಒಟ್ಟಿನಿಂದ ಮುಂದಿನ ಚುನಾವಣೆ ಎದುರಸಲಿದೆ. ಕಾಂಗ್ರೆಸ್ ಪಾರ್ಟಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಕರ್ನಾಟಕ ಕಾಂಗ್ರೆಸ್ ಒಟ್ಟಿನಿಂದ ಮುಂದಿನ ಚುನಾವಣೆ ಎದುರಸಲಿದೆ. ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದ್ದೇವೆ ಎಂದರು.
ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ, ಟಿಕೆಟ್ ನೀಡುವ ಬಗ್ಗೆ ಪಕ್ಕಾ ಪ್ಲಾನ್ ಮಾಡಲಾಗಿದೆ. ಆದರೆ, ಎಲ್ಲವನ್ನೂ ಮಾಧ್ಯಮಗಳಿಗೆ ಹೇಳುವುದಿಲ್ಲ. ಬಿಜೆಪಿ ದುರಾಡಳಿತದ ಬಗ್ಗೆ ಗಟ್ಟಿ ಧ್ವನಿಯಲ್ಲಿ ಹೋರಾಟ ನಡೆಸಲಿದ್ದೇವೆ. ಬಿಜೆಪಿ ಪಕ್ಷ ರಾಜ್ಯ ಲೂಟಿ ಹೊಡೆದರಲ್ಲಿ ಚೆನ್ನಾಗಿ ಪ್ಲಾನ್ ಮಾಡಿದೆ. ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲಿದ್ದೇವೆ ಎಂದರು.
ಇದನ್ನೂ ಓದಿ: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್ ಗಾಂಧಿ