ಹುಬ್ಬಳ್ಳಿ: ವಾರ್ಡ್ ನಂ. 48 ಕೇಶ್ವಾಪೂರದ ನವೀನ್ ಪಾರ್ಕ್ನಲ್ಲಿ ಗಾರ್ಡನ್ಗೆ ಬಿಟ್ಟಿದ್ದ ಸ್ಥಳದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಪಾಲಿಕೆ ಅಧಿಕಾರಿಗಳು ನೊಟೀಸ್ ಜಾರಿ ಮಾಡಿ ಕಾಮಗಾರಿ ತಡೆ ಹಿಡಿದಿದ್ದಾರೆ.
ಈ ವಿಚಾರವಾಗಿ ಹಿಂದೆ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗಿತ್ತು. ಇದರಿಂದ ಎಚ್ಚೆತ್ತಕೊಂಡ ಪಾಲಿಕೆ ಅಧಿಕಾರಿಗಳು ಕಟ್ಟಡ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ನೊಟೀಸ್ ಜಾರಿ ಮಾಡಿ ಕಾಮಗಾರಿ ತಡೆ ಹಿಡಿದಿದ್ದಾರೆ.
ಈ ಕುರಿತು ಮಾತನಾಡಿದ ಹು-ಧಾ ಪಾಲಿಕೆ ಆಯುಕ್ತರು, ನವೀನ್ ಪಾರ್ಕ್ ನಲ್ಲಿ ಪಾಲಿಕೆ ಅಧಿಕಾರಿಗಳ ಕಣ್ಣು ತಪ್ಪಿಸಿ ಇಂತಹ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಈಗಾಗಲೇ ಕಾಮಗಾರಿಯನ್ನು ತಡೆಯಲಾಗಿದೆ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಹೇಳಲಾಗಿದೆ ಎಂದರು.