ಧಾರವಾಡ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತನೋರ್ವ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿದೆ ಬಂದಿದೆ.
ಜಿಲ್ಲೆಯ ಆಳ್ನಾವರ ತಾಲೂಕಿನ ಗ್ರಾಮವೊಂದರ 56 ವಯಸ್ಸಿನ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಖ ತೊಳೆದುಕೊಂಡು ಬರುತ್ತೇನೆ ಎಂದು ಹೇಳಿ ವಾರ್ಡ್‌ನಿಂದ ಹೊರ ಹೋಗಿದ್ದ ವ್ಯಕ್ತಿ, ಆರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಅನಾರೋಗ್ಯದಿಂದ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗ್ತಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.