ETV Bharat / city

ಧಾರವಾಡದ ಮೊದಲ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖ - ಜಿಲ್ಲಾಧಿಕಾರಿ ದೀಪಾ ಚೋಳನ್

ಕೋವಿಡ್-19 ಪಾಸಿಟಿವ್ ವರದಿ ಬಂದ ದಿನದಿಂದ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ಪ್ರಕರಣ ಧಾರವಾಡ ಜಿಲ್ಲೆಯ ಮೊದಲ ಪ್ರಕರಣವಾಗಿದ್ದು, ರಾಜ್ಯದ 21ನೇ ಪ್ರಕರಣವಾಗಿದ್ದರಿಂದ ಪಿ.21 ಎಂದು ಗುರುತಿಸಲಾಗಿತ್ತು. ಸದ್ಯ ಸೋಂಕಿತನು ಗುಣಮುಖವಾಗಇದ್ದು ಡಿಸ್ಚಾರ್ಜ್​ ಮಾಡಲಾಗಿದೆ.

kims
author img

By

Published : Apr 6, 2020, 8:16 AM IST

ಹುಬ್ಬಳ್ಳಿ: ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿದ್ದ ಧಾರವಾಡ ನಗರದ ಹೊಸಯಲ್ಲಾಪುರದ 33 ವರ್ಷದ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು ಇಂದು ಸಂಜೆ ಹುಬ್ಬಳ್ಳಿಯ ಕಿಮ್ಸ್​ನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾದಿಂದ ದುಬೈ ,ಮಸ್ಕತ್, ಪಣಜಿ ಮಾರ್ಗವಾಗಿ ಧಾರವಾಡಕ್ಕೆ ಮಾ.12ರಂದು ಆಗಮಿಸಿದ್ದ ಈ ವ್ಯಕ್ತಿ ರೋಗಲಕ್ಷಣ ಕಂಡು ಬಂದಿದ್ದರಿಂದ ಮಾ.17ರಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದರು. ಅಲ್ಲಿಂದ ಮಾ‌.18ರಿಂದ 21ರವರೆಗೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಕೋವಿಡ್-19 ಪಾಸಿಟಿವ್ ವರದಿ ಬಂದ ದಿನದಿಂದ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಿದ ಬಳಿಕ ರೋಗದಿಂದ ಚೇತರಿಸಿಕೊಳ್ಳತೊಡಗಿದರು.

ಇವರ ಗಂಟಲು ದ್ರವದ ಪ್ರಯೋಗಾಲಯದ ಮಾದರಿಯನ್ನು ಮಾರ್ಚ್ 31 ಹಾಗೂ ಏಪ್ರಿಲ್​ 3ರಂದು ಎರಡು ಬಾರಿ ಮತ್ತೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಎರಡೂ ಸಲ ನೆಗೆಟಿವ್ ವರದಿ ಬಂದಿದ್ದು ಗುಣಮುಖರಾದ ಇವರನ್ನು ಕಿಮ್ಸ್​ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಯಿತು.

ಈ ಪ್ರಕರಣ ಧಾರವಾಡ ಜಿಲ್ಲೆಯ ಮೊದಲ ಪ್ರಕರಣವಾಗಿದ್ದು, ರಾಜ್ಯದ 21ನೇ ಪ್ರಕರಣವಾಗಿದ್ದರಿಂದ ಪಿ.21 ಎಂದು ಗುರುತಿಸಲಾಗಿತ್ತು.

ಕೋವಿಡ್-19 ಪಾಸಿಟಿವ್ ವ್ಯಕ್ತಿಗೆ ಉತ್ತಮ ಚಿಕಿತ್ಸೆ ನೀಡಿ ಅವರನ್ನು ಸೋಂಕಿನಿಂದ ಗುಣಪಡಿಸುವಲ್ಲಿ ಶ್ರಮಿಸಿದ ಹುಬ್ಬಳ್ಳಿಯ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್, ಚಿಕಿತ್ಸೆ ನೀಡಿದ ತಜ್ಞ ವೈದ್ಯರು, ಶುಶ್ರೂಶಕಿಯರು, ಸಹಾಯಕ ಸಿಬ್ಬಂದಿಗೆ ಅಭಿನಂದನೆ ತಿಳಿಸಲಾಯಿತು.

ರೋಗಿಯ ಪ್ರಾಥಮಿಕ ಮತ್ತು ಸೆಕೆಂಡರಿ ಸಂಪರ್ಕಕ್ಕೆ ಬಂದ ಎಲ್ಲಾ ಜನರ ಮಾಹಿತಿಗಳನ್ನು ತ್ವರಿತವಾಗಿ ಸಂಗ್ರಹಿಸಿ ಅಗತ್ಯ ಇದ್ದವರನ್ನು ಪರೀಕ್ಷೆಗೊಳಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಸೇರಿದಂತೆ, ಆರೋಗ್ಯ, ಪೊಲೀಸ್, ಮಹಾನಗರಪಾಲಿಕೆ ಎಲ್ಲಾ ಸಂಬಂಧಿತ ಇಲಾಖೆಗಳ ಪರಿಶ್ರಮಕ್ಕೆ ಜಿಲ್ಲಾಧಿಕಾರಿಗಳು ಕೃತಜ್ಞತೆ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.