ಧಾರವಾಡ: ಜಿಲ್ಲೆಯಲ್ಲಿಂದು 184 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,275ಕ್ಕೆ ಏರಿಕೆಯಾಗಿದೆ.
ಅಲ್ಲದೆ, ಇಂದು 8 ಮಂದಿ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 139ಕ್ಕೆ ಏರಿಕೆಯಾಗಿದೆ. 50 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 1,779 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಸದ್ಯ, ಜಿಲ್ಲೆಯಲ್ಲಿ 2,357 ಒಟ್ಟು ಸಕ್ರಿಯ ಪ್ರಕರಣಗಳಿವೆ.