ETV Bharat / city

ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯ: ಆಮ್ಲಾನ್ ಆದಿತ್ಯ ಬಿಸ್ವಾಸ್

ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಹಾಗೂ ಭಾರತ ಚುನಾವಣಾ ಆಯೋಗವು ನೀಡಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳು ಚಾಚೂ ತಪ್ಪದೇ ಪಾಲಿಸುವುದು ಕಡ್ಡಾಯವಾಗಿದೆ ಎಂದು ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು.

dharwad
ಚುನಾವಣಾ ಅಭ್ಯರ್ಥಿಗಳ ಸಭೆ
author img

By

Published : Oct 13, 2020, 9:32 PM IST

ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಹಾಗೂ ಭಾರತ ಚುನಾವಣಾ ಆಯೋಗವು ನೀಡಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳು ಚಾಚೂ ತಪ್ಪದೇ ಪಾಲಿಸುವುದು ಕಡ್ಡಾಯವಾಗಿದೆ ಎಂದು ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು.

ಅವರು ಇಂದು ಸಂಜೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾ ಭವನದಲ್ಲಿ ರಾಜಕೀಯ ಪಕ್ಷದ ಪ್ರತಿನಿಧಿಗಳ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣಾ ಪ್ರಕ್ರಿಯೆಗಳು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ಜರುಗುವಂತೆ ಕ್ರಮ ವಹಿಸುವುದು ಎಲ್ಲರ ಕರ್ತವ್ಯವಾಗಿದೆ. ಭಾರತದ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಘೋಷಿಸಿದ ದಿನದಿಂದ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯನ್ನು ಪ್ರತಿಯೊಂದು ಪಕ್ಷಗಳು ಪಾಲಿಸಬೇಕು ಎಂದರು.

ಇನ್ನು ಬಹಿರಂಗ ಪ್ರಚಾರ, ವಾಹನಗಳ ಬಳಕೆ, ಪ್ರಚಾರ ಸಾಮಗ್ರಿ ಇತ್ಯಾದಿಗಳ ಕುರಿತು ಅನುಮತಿ ನೀಡಲು ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕ್ರಮಕೈಗೊಳ್ಳಲಾಗಿದೆ.

ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮಗೆ ಅಗತ್ಯವಿರುವ ಅನುಮತಿಗಳನ್ನು ಸಹಾಯಕ ಚುನಾವಣಾಧಿಕಾರಿಗಳು ಆಗಿರುವ ಆಯಾ ಜಿಲ್ಲಾಧಿಕಾರಿಗಳಿಂದ ಪಡೆಯಬಹುದು. ಬಹಿರಂಗ ಪ್ರಚಾರ ಸಭೆಗಳಲ್ಲಿ ಮತ್ತು ಮನೆ ಮನೆಗೆ ತೆರಳಿ ಪ್ರಚಾರ ಹಾಗೂ ಒಳಾಂಗಣ ಸಭೆಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳಲ್ಲಿ ತಿಳಿಸಿರುವ ಸಂಖ್ಯೆಯಷ್ಟು ಸಾರ್ವಜನಿಕರು ಮಾತ್ರ ಭಾಗವಹಿಸಬೇಕು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಪ್ರಚಾರ ವಾಹನಗಳ ಬಳಕೆಗೆ ಪ್ರತ್ಯೇಕ ನಿಯಮಗಳಿದ್ದು, ಅನುಮತಿ ಪಡೆದ ವಾಹನದಲ್ಲಿ ಅನುಮತಿ ಪತ್ರದ ಮೂಲಪ್ರತಿಯನ್ನು ಮಾತ್ರ ಲಗತ್ತಿಸಬೇಕು. ವಾಹನ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರ ವಾಹನದಲ್ಲಿ ಸಂಚರಿಸಬೇಕು. ಪರಸ್ಪರ ಸಾಮಾಜಿಕ ಅಂತರ ಕಾಪಾಡಬೇಕು. ಈ ನಿಯಮಗಳನ್ನು ಪಾಲಿಸದ ವಾಹನಗಳ ಮೇಲೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣ ದಾಖಲಿಸಿ, ವಾಹನಗಳನ್ನು ವಶಕ್ಕೆ ಪಡೆಯಲಾಗುವುದು. ಮತ್ತು ಆರ್​ಟಿಒ ಮೂಲಕ ವಾಹನದ ನೋಂದಣಿ ರದ್ದುಗೊಳಿಸಲು ಚುನಾವಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

dharwad
ರಾಜಕೀಯ ಪಕ್ಷದ ಪ್ರತಿನಿಧಿಗಳ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳ ಸಭೆ

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಚುನಾವಣಾ ಕ್ಷೇತ್ರ ವ್ಯಾಪ್ತಿಯ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ ಮೂರು ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣೆ ನಿಯಮಗಳ ಉಲ್ಲಂಘನೆ ಕುರಿತು ದೂರುಗಳನ್ನು ದಾಖಲಿಸಲು, ಸಾರ್ವಜನಿಕರು ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 1,077 ಸಹಾಯವಾಣಿ ಸ್ಥಾಪಿಸಲಾಗಿದೆ. ಮತ್ತು ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಕುರಿತ ಯಾವುದೇ ರೀತಿಯ ದೂರುಗಳಿದ್ದಲ್ಲಿ ಎಂಸಿಸಿ ಕಮಿಟಿಯ ಅಧ್ಯಕ್ಷರಾಗಿರುವ ಜಿಲ್ಲಾ ಪಂಚಾಯತ್ ಸಿಇಒ ಅವರ ಮೊಬೈಲ್ 9480864000 ಮತ್ತು ಧಾರವಾಡ ಉಪವಿಭಾಗಾಧಿಕಾರಿ ಮೊಬೈಲ್ 9731008189 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು. ಮಾಹಿತಿದಾರರು ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ನೀಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ​, ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಸಿಇಒ ಡಾ. ಸುಶೀಲಾ, ಉಪವಿಭಾಗಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.