ETV Bharat / city

ಮಹಾರಾಷ್ಟ್ರ,ಕೇರಳದಿಂದ ಬರುವವರಿಗೆ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

author img

By

Published : Aug 3, 2021, 4:42 PM IST

ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡ ಜಿಲ್ಲೆಗೆ ಬರುವ ಪ್ರಯಾಣಿಕರಿಗೆ ಜಿಲ್ಲಾಡಳಿತ ಕೊರೊನಾ ನೆಗೆಟಿವ್​ ವರದಿ ಕಡ್ಡಾಗೊಳಿಸಿ ಆದೇಶ ಹೊರಡಿಸಿದೆ.

covid negative report compulsory for those who comes from Kerala and maharashtra
ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

ಧಾರವಾಡ: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡ ಜಿಲ್ಲೆಗೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಯೊಳಗೆ ಕೊರೊನಾ ತಪಾಸಣೆ ನಡೆಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರಬೇಕು ಎಂದು ಆದೇಶಿಸಲಾಗಿದೆ.

ಕೊರೊನಾ ಮೂರನೇ ಅಲೆ ಆತಂಕ ಹಿನ್ನೆಲೆ ಹಾಗೂ ಮಹಾರಾಷ್ಟ್ರ, ಕೇರಳ ರಾಜ್ಯದಲ್ಲಿ ಕೊರೊನಾ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೇ ಧಾರವಾಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕೆಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

72 ಗಂಟೆಯೊಳಗೆ ಕೊರೊನಾ ತಪಾಸಣೆ ನಡೆಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಇದು ಬಸ್​, ರೈಲು, ವಿಮಾನದ ಮೂಲಕ ಪ್ರಯಾಣಿಕರಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆ, ವಿಮಾನ ನಿಲ್ದಾಣದ ಸಿಬ್ಬಂದಿ, ರೈಲ್ವೆ ಇಲಾಖೆ ಸಿಬ್ಬಂದಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ಪ್ರಯಾಣಿಕರ ಆರ್‌ಟಿಪಿಸಿಆರ್ ಕೊರೊನಾ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್​ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.