ETV Bharat / city

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಮಾಹಿತಿ ಸಂಗ್ರಹಕ್ಕೆ ತಂಡ ರಚಿಸಿ: ಧಾರವಾಡ ಡಿಸಿ

author img

By

Published : Apr 22, 2020, 8:44 PM IST

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಮಾಹಿತಿ ದೊರೆಯುತ್ತಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಕುರಿತು ಮಾಹಿತಿ ಸಂಗ್ರಹಿಸಲು ತಂಡಗಳನ್ನು ರಚಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್​ ಸೂಚಿಸಿದ್ದಾರೆ.

ದೀಪಾ ಚೋಳನ್
ದೀಪಾ ಚೋಳನ್

ಧಾರವಾಡ: ಸರ್ಕಾರದ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಆರೋಗ್ಯ ಸೇವೆ ಪಡೆಯುತ್ತಿರುವವರ ದಾಖಲೆಗಳು ದೊರೆಯುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಮಾಹಿತಿ ದೊರೆಯುತ್ತಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಕುರಿತು ಮಾಹಿತಿ ಸಂಗ್ರಹಿಸಲು ತಂಡಗಳನ್ನು ರಚಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್​ ಸೂಚಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಮುಂದುವರೆದಿರುವ ಹಿನ್ನೆಲೆ ತೀವ್ರ ಉಸಿರಾಟದ ತೊಂದರೆ, ಕೆಮ್ಮು, ನೆಗಡಿ ಮತ್ತು ಜ್ವರಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಬಗ್ಗೆ ಮಾಹಿತಿ ಸಂಗ್ರಹಿಸಿ, ವರದಿ ನೀಡಲು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನೊಳಗೊಂಡ ತಂಡಗಳನ್ನು ರಚಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್​ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾದ 1,750 ಆಸ್ಪತ್ರೆ ಮತ್ತು ಕ್ಲಿನಿಕ್‍ಗಳಿವೆ. ಅವುಗಳಲ್ಲಿ ಸುಮಾರು 1,500 ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಇದೆ. ಪ್ರಸಕ್ತ ಲಾಕ್‍ಡೌನ್ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ವಾಸ್ತವವಾಗಿ ಎಷ್ಟು ಸಾರ್ವಜನಿಕರು ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಸಂಗ್ರಹಣೆ ಅಧಿಕೃತವಾಗಿ ನಡೆಯಬೇಕು. ಈ ಆಸ್ಪತ್ರೆಗಳಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ ತೀವ್ರ ಉಸಿರಾಟದ ತೊಂದರೆ, ಕೆಮ್ಮು, ನೆಗಡಿ, ಜ್ವರಕ್ಕೆ ಚಿಕಿತ್ಸೆ ಪಡೆದವರ ಮಾಹಿತಿ ಕ್ರೋಢೀಕರಣ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಯ ವೈದ್ಯರು ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಿದ್ದರೆ ಆ ಕುರಿತ ವಿವರಗಳನ್ನು ಕೂಡ ಸಂಗ್ರಹಿಸಬೇಕು. ಜಿಲ್ಲೆಯಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಷಯ, ಕುಷ್ಠರೋಗ, ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ಗುಂಪಿನ ಸುಮಾರು 1,06,000 ಜನರಿದ್ದಾರೆ. ಅವರೆಲ್ಲರನ್ನೂ ಆಶಾ ಕಾರ್ಯಕರ್ತೆಯರು ಖುದ್ದಾಗಿ ಭೇಟಿ ಮಾಡಿ ಅಗತ್ಯ ಔಷಧಿ, ಸಲಹೆ ದೊರೆಯುವಂತೆ ನೋಡಿಕೊಳ್ಳುತ್ತಿದ್ದಾರೆಯೇ ಎಂಬುದರ ಬಗ್ಗೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು. ಆಶಾ ಕಾರ್ಯಕರ್ತೆಯರಿಗೆ ಈ ಕುರಿತು ಸೂಕ್ತ ಮಾರ್ಗದರ್ಶನ, ತಿಳುವಳಿಕೆ ನೀಡಬೇಕು. ಸಮೀಕ್ಷೆಯ ಮಾಹಿತಿ ಸಂಗ್ರಹಣೆಗೆ ಸಮರ್ಪಕವಾದ ನಮೂನೆಯನ್ನು ಸಿದ್ಧಪಡಿಸಿಕೊಡಬೇಕು. ಇದರಲ್ಲಿ ಕೆಮ್ಮು, ಜ್ವರ, ನೆಗಡಿ, ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರ ಮಾಹಿತಿ ದಾಖಲಿಸಿ ಮೇಲಾಧಿಕಾರಿಗಳಿಗೆ ಕೂಡಲೇ ತಿಳಿಸಲು ಸೂಚನೆ ನೀಡಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.