ಹುಬ್ಬಳ್ಳಿ: ದೇಶದಲ್ಲಿ 15ನೇ ಆವೃತ್ತಿಯ ಐಪಿಎಲ್ ಟಿ-20 ಕ್ರೇಜ್ ಹೆಚ್ಚಾಗುತ್ತಿದ್ದು, ಇದರ ನಡುವೆ ಕ್ರಿಕೆಟ್ ಮೇಲೆ ಬೆಟ್ಟಿಂಗ್ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಖಚಿತ ಮಾಹಿತಿ ಮೇರೆಗೆ ಉಪನಗರ ಠಾಣೆ ಪೊಲೀಸರು ಹೊಸೂರು ಕ್ರಾಸ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸೂರಿನ ಸಂಜು ರೋಣದ, ಮನೀಷ ಕೊರವರ ಬಂಧಿತ ಆರೋಪಿಗಳು. ಅರುಣ ಕಠಾರೆ ಎಂಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಬಂಧಿತರಿಂದ ಮೂರು ಮೊಬೈಲ್ ಹಾಗೂ 6,100 ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಮುಂಬೈನಲ್ಲಿ ನಡೆಯುತ್ತಿದ್ದ ಗುಜರಾತ್ ಟೈಟನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಾವಿ : ಪಿಸ್ತೂಲ್ ತೋರಿಸಿ ಬೆದರಿಸಿ 1.5 ಲಕ್ಷ ರೂ. ದೋಚಿದ ದುಷ್ಕರ್ಮಿಗಳು