ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ (rain in Dharwad) ಹಿನ್ನೆಲೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಅಪಾರ ಪ್ರಮಾಣದ ಬೆಳೆ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.
ಭಾರಿ ಮಳೆಗೆ ನೀರಸಾಗರ ಜಲಾಶಯದ ನೀರು ಹೆಚ್ಚಿ ಹೊರ ಹರಿದ ಪರಿಣಾಮ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಎಮ್ಮೆಟ್ಟಿ, ನೀರಸಾಗರ, ಮುತ್ತಗಿ, ಗಂಬ್ಯಾಪುರ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ.
ಇದನ್ನೂ ಓದಿ: ವಿಜಯಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ.. ಹಲವರಿಗೆ ಗಾಯ
ನೀರು ಹೆಚ್ಚಾಗಿದ್ದರಿಂದ ಹೊಲಗಳಲ್ಲಿ ಬೆಳೆದಿದ್ದ ಭತ್ತ, ಗೋವಿನಜೋಳ, ಸೋಯಾಬಿನ್ ಸೇರಿ ಇತರೆ ಬೆಳೆಗಳು ಸಂಪೂರ್ಣ (crop damaged due to rain) ನಾಶವಾಗಿದೆ. ಬೆಳೆ ಬೆಳೆದು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ಅನ್ನದಾತರೀಗ ಆತಂಕ್ಕೆ ಒಳಗಾಗಿದ್ದಾರೆ.