ಧಾರವಾಡ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮೂರು ನವಜಾತ ಹೆಣ್ಣು ಶಿಶುಗಳನ್ನು ಎತ್ತಿಕೊಂಡು ಶುಭ ಹಾರೈಸಿದರು.
ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ತಾಯಂದಿರಿಗೆ ಪೌಷ್ಟಿಕತೆ ಮತ್ತು ಆರೋಗ್ಯ ಬಗ್ಗೆ ಕಾಳಜಿ ವಹಿಸಿ ಎಂದರು. ಅಲ್ಲದೆ ಹೆಣ್ಣು ಮಗು ಹೆತ್ತ ಬಗ್ಗೆ ಅಭಿಮಾನ ಹೊಂದಿ, ಉತ್ತಮ ಶಿಕ್ಷಣ, ಸಂಸ್ಕಾರ ನೀಡಲು ಸಲಹೆ ನೀಡಿ ಪಾರಂಪರಿಕ ಧಾರವಾಡ ಪೇಡಾ ನೀಡಿ ಸಂತಸ ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಶೆಟ್ಟರ್ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.