ETV Bharat / city

ಜೂನ್ 7 ರಿಂದ 14 ರವರೆಗೆ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿ: ಧಾರವಾಡ ಡಿಸಿ ಆದೇಶ - ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ

ಜಿಲ್ಲಾಧಿಕಾರಿಗಳ ಕಚೇರಿಯಿಂದ ಈಗಾಗಲೇ ದಿನಾಂಕ 23-5-2021 ರಂದು ಹೊರಡಿಸಿರುವ ಆದೇಶದಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಮತ್ತು ಅವುಗಳೊಂದಿಗೆ ನೀಡಿರುವ ಕೆಲವು ಅಂಶಗಳನ್ನು ತಪ್ಪದೇ ಪಾಲಿಸಬೇಕು ಎಂದು ಪರಿಷ್ಕೃತ ಆದೇಶದಲ್ಲಿ ಧಾರವಾಡ ಡಿಸಿ ನಿರ್ದೇಶಿಸಿದ್ದಾರೆ.

lockdown-continuation-in-dharwad
ಧಾರವಾಡ ಡಿಸಿ ಆದೇಶ
author img

By

Published : Jun 5, 2021, 10:55 PM IST

ಧಾರವಾಡ: ಜಿಲ್ಲಾದ್ಯಂತ ಕೋವಿಡ್-19 ಸೋಂಕು ಹರಡದಂತೆ ಪರಿಣಾಮಕಾರಿಯಾದ ಕ್ರಮ ಜರುಗಿಸುವುದಕ್ಕಾಗಿ ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಧಾರವಾಡ ಜಿಲ್ಲಾದ್ಯಂತ ಜೂನ್ 7, ಬೆಳಗ್ಗೆ 6 ಗಂಟೆಯಿಂದ ಜೂನ್ 14 ಬೆಳಗ್ಗೆ 6 ಗಂಟೆಯವರೆಗೆ ಲಾಕ್‍ಡೌನ್ ಮುಂದುವರಿಸಿ ಪರಿಷ್ಕೃತ ಆದೇಶವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

lockdown-continuation-in-dharwad
ಧಾರವಾಡ ಡಿಸಿ ಆದೇಶ

ಓದಿ: ಮಿಷನ್ 2023: ಒಂದಾದ ಸತೀಶ್​ - ಪಟ್ಟಣ್, ಮುನಿಸು ಮರೆತ ಅಂಜಲಿ - ಹೆಬ್ಬಾಳ್ಕರ್!

ಜಿಲ್ಲಾಧಿಕಾರಿಗಳ ಕಚೇರಿಯಿಂದ ಈಗಾಗಲೇ ದಿನಾಂಕ 23-5-2021 ರಂದು ಹೊರಡಿಸಿರುವ ಆದೇಶದಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಮತ್ತು ಅವುಗಳೊಂದಿಗೆ ನೀಡಿರುವ ಕೆಲವು ಅಂಶಗಳನ್ನು ತಪ್ಪದೇ ಪಾಲಿಸಬೇಕು ಎಂದು ಪರಿಷ್ಕೃತ ಆದೇಶದಲ್ಲಿ ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

lockdown-continuation-in-dharwad
ಧಾರವಾಡ ಡಿಸಿ ಆದೇಶ

ಆಹಾರ, ದಿನಸಿ, ಬೇಕರಿ, ಕಿರಾಣಿ, ಹಣ್ಣು ಮತ್ತು ತರಕಾರಿ, ಡೈರಿ, ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಜೂನ್ 7 ರಿಂದ 14 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

ನ್ಯಾಯ ಬೆಲೆ ಅಂಗಡಿಗಳು ಜೂನ್ 7 ರಿಂದ 14 ರವರೆಗೆ ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶವಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಹೋಟೆಲ್, ಅಂಗಡಿಗಳು ತೆರೆದು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಆಹಾರ ಪದಾರ್ಥಗಳನ್ನು ಕೇವಲ ಪಾರ್ಸಲ್ ಕೊಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅಗತ್ಯ ಸೇವೆಗಳಿಗೆ ಅನುಮತಿ:

ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ‌ ತೀರ್ಮಾನಿಸಲಾಯಿತು.

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಜರುಗಿದ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ, ಜಿ.ಪಂ.ಸಿಇಒ ಡಾ.ಬಿ.ಸುಶೀಲ, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹೋಟೆಲ್‌ಗಳ ಮೂಲಕ ಹೋಮ್ ಡಿಲಿವರಿಗೆ ರಾತ್ರಿ 8 ವರೆಗೆ ಸಮಯಾಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚಿಸಿದರು. ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಲಸಿಕೆ ಕಾರ್ಯ ಚುರುಕುಗೊಳ್ಳಬೇಕು. ಸರ್ಕಾರದ ಪರಿಷ್ಕೃತ ಆದೇಶದಂತೆ ಆದ್ಯತೆ ಮತ್ತು ದುರ್ಬಲ ವರ್ಗದವರಿಗೆ ಕಡ್ಠಾಯವಾಗಿ ಲಸಿಕೆ ನೀಡಿಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು‌.

ಜಿಲ್ಲೆಯಲ್ಲಿ ಬೆಳೆ ವಿಮೆ ಮತ್ತು ಪರಿಹಾರ ಕಾರ್ಯಪೂರ್ಣಗೊಂಡಿದೆ. ತಾಂತ್ರಿಕ ಕಾರಣಗಳಿಂದ ವಿಮೆ ಲಭಿಸದರ ವಿವರ ಪಡೆಯಲಾಗಿದೆ. ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಲಿದ್ದಾರೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹಣ್ಣು ಬೆಳೆಗಾರರಿಗೆ ರೂ. 1,08,64,487 ಹಾಗೂ ತರಕಾರಿ ಬೆಳಗಾರಿಗೆ ರೂ.55,400 ಬಿಡುಗಡೆಯಾಗಿದೆ. ಹೂ ಬೆಳೆಗಾರರಿಗೆ ರೂ.10,73,529 ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆಗೆ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.