ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಗೌಡ ಪಾಟೀಲ ಇಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ನಿವಾಸಿಯಾಗಿದ್ದ ಸುರೇಶ್ಗೌಡ ಪಾಟೀಲ್ ಅವರು ಕಾಂಗ್ರೆಸ್ನಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪೂನಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.