ETV Bharat / city

ಕೊರೊನಾ ತಡೆಗಟ್ಟಲು ವಿವಿಧ ಇಲಾಖೆಯ ಸಿಬ್ಬಂದಿ ನಿಯೋಜನೆ!

ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲನೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ವಿವಿಧ ಇಲಾಖೆಯಲ್ಲಿರುವ ಸಮವಸ್ತ್ರಧಾರಿ ಸಿಬ್ಬಂದಿ ನಿಯೋಜಿಸುವುದು ಅಗತ್ಯವಿರುವ ಕಾರಣಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ವಿವಿಧ ಇಲಾಖೆಯ ಸಿಬ್ಬಂದಿಯನ್ನ ನಿಯೋಜನೆ ಮಾಡಿದ್ದಾರೆ.

Hubli
ಕೊರೊನಾ ತಡೆಗಟ್ಟಲು ವಿವಿಧ ಇಲಾಖೆಯ ಸಿಬ್ಬಂದಿ ನಿಯೋಜನೆ
author img

By

Published : May 28, 2021, 1:44 PM IST

ಹುಬ್ಬಳ್ಳಿ: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಅನುಷ್ಠಾನಕ್ಕೆ ತರುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ದಿನ ಕಳೆದಂತೆ ಇಲಾಖೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತ ಇತರೆ ಇಲಾಖೆಯ ಸಮವಸ್ತ್ರಧಾರಿ ಸಿಬ್ಬಂದಿಯನ್ನು ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಬಳಕೆಗೆ ಮುಂದಾಗಿದೆ.

ಕೊರೊನಾ ತಡೆಗಟ್ಟಲು ವಿವಿಧ ಇಲಾಖೆಯ ಸಿಬ್ಬಂದಿ ನಿಯೋಜನೆ

ದಿನ ಕಳೆದಂತೆ ಧಾರವಾಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಗರ, ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿದ್ದ ಸೋಂಕು ಈಗ ಹಳ್ಳಿಗಳಿಗೂ ವಕ್ಕರಿಸಿದೆ. ಇಂತಹ ಸಂದರ್ಭದಲ್ಲಿ ಸೋಂಕು ಹರಡಂತೆ ನಿಯಂತ್ರಿಸುವುದು ಜಿಲ್ಲಾಡಳಿತಕ್ಕೆ ಸವಾಲಿನ ಕಾರ್ಯವಾಗಿದೆ. ಸೋಂಕು ನಿಯಂತ್ರಣಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಪರಿಣಾಮಕಾರಿಯಾಗಿದೆ.

ಹೀಗಾಗಿ ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲನೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ವಿವಿಧ ಇಲಾಖೆಯಲ್ಲಿರುವ ಸಮವಸ್ತ್ರಧಾರಿ ಸಿಬ್ಬಂದಿ ನಿಯೋಜಿಸುವುದು ಅಗತ್ಯವಿರುವ ಕಾರಣಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ವಿವಿಧ ಇಲಾಖೆಯ ಸಿಬ್ಬಂದಿಯನ್ನ ನಿಯೋಜನೆ ಮಾಡಿದ್ದಾರೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ನಗರ, ಗ್ರಾಮೀಣ ಹಾಗೂ ಧಾರವಾಡ ವಿಭಾಗದಿಂದ 40 ವರ್ಷದೊಳಗಿನ 126 ಪುರುಷ ಸಿಬ್ಬಂದಿಯನ್ನು ಜಿಲ್ಲಾಡಳಿತ ಪಡೆದು ಹುಬ್ಬಳ್ಳಿ-ಧಾರವಾಡ ಕಮಿಷನ್‌ರೇಟ್ ಜಿಲ್ಲಾ ಪೊಲೀಸ್ ಇಲಾಖೆ ಸುಪರ್ದಿಗೆ ನೀಡಲಾಗಿದೆ. ಇವರನ್ನು ಸಿಬ್ಬಂದಿ ಕೊರತೆಯಿರುವ ಆಯಾ ಠಾಣೆಗೆ ನಿಯೋಜಿಸಲಾಗಿದೆ.

ಸಿಬ್ಬಂದಿಗೆ ಊಟ-ಭತ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳು ಭರಿಸಬೇಕು. ಸಿಬ್ಬಂದಿಯನ್ನು ಕೇವಲ ಕೋವಿಡ್ ಕರ್ತವ್ಯಕ್ಕೆ ಮಾತ್ರ ಬಳಸಿಕೊಳ್ಳಬೇಕು. ಜೊತೆಗೆ ಲಸಿಕೆ ಕೊಡಿಸಬೇಕೆಂದು ಜಿಲ್ಲಾಡಳಿತ ನಿರ್ದೇಶನ ನೀಡಿದೆ. ವಿವಿಧ ಇಲಾಖೆಯಿಂದ ಪಡೆದ ಮೊದಲ ಹಂತದ ಸಿಬ್ಬಂದಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದರೊಂದಿಗೆ ಅರಣ್ಯ ಇಲಾಖೆಯ ಇಬ್ಬರು ವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕ ಸೇರಿ 33 ಸಿಬ್ಬಂದಿ, ಅಬಕಾರಿ ಇಲಾಖೆಯಿಂದ 12 ಅಬಕಾರಿ ಪೊಲೀಸರನ್ನು ಲಾಕ್​ಡೌನ್ ಕರ್ತವ್ಯಕ್ಕೆ ಪಡೆಯಲಾಗಿದೆ.

ಈಗಾಗಲೇ ಧಾರವಾಡ ಜಿಲ್ಲಾ ಗಡಿ, ಠಾಣೆ ಗಡಿಗಳಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್​ಗಳಿಗೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಪ್ರಮುಖವಾಗಿ ಗ್ರಾಮೀಣ ಭಾಗದ ಚೆಕ್‌ ಪೋಸ್ಟ್‌ಗಳಿಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಓರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ಇತರೆ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಲಾಗಿದೆ.

ಓದಿ: ತಾಕತ್ತಿದ್ದರೆ ಡೀಸಿಯನ್ನು ವರ್ಗಾವಣೆ ಮಾಡಿ ತೋರಿಸು: ಪ್ರತಾಪ್​ ಸಿಂಹಗೆ ಜಿ.ಟಿ ದೇವೇಗೌಡ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.