ETV Bharat / city

ವಸತಿ ನಿಲಯದಲ್ಲಿ 13 ವಿದ್ಯಾರ್ಥಿನಿಯರಿಗೆ ಕೊರೊನಾ: ಧಾರವಾಡದಲ್ಲಿ ಹಾಸ್ಟೆಲ್ ಸೀಲ್​ಡೌನ್

ಒಟ್ಟು 71 ವಿದ್ಯಾರ್ಥಿನಿಯರ ಪೈಕಿ 13 ವಿದ್ಯಾರ್ಥಿನಿಯರಿಗೆ ಸೋಂಕು ದೃಢವಾದ ಹಿನ್ನೆಲೆ ವಸತಿ ಶಾಲೆಯನ್ನು ಸೀಲ್​ಡೌನ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿನಿಯರನ್ನು ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಿದ್ದು, ಉಳಿದ ವಿದ್ಯಾರ್ಥಿನಿಯರನ್ನು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ.

dharawad
ಹಾಸ್ಟೆಲ್ ಸೀಲ್​ಡೌನ್
author img

By

Published : Jan 10, 2022, 2:50 PM IST

ಧಾರವಾಡ: ನಗರದ ಪೊಲೀಸ್ ಹೆಡ್ ಕ್ವಾಟ್ರಸ್​ ಬಳಿಯಿರುವ ಅಲ್ಪಸಂಖ್ಯಾತ ಇಲಾಖೆಯ ಮೆಟ್ರಿಕ್​ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಒಟ್ಟು 71 ವಿದ್ಯಾರ್ಥಿನಿಯರ ಪೈಕಿ 13 ವಿದ್ಯಾರ್ಥಿನಿಯರಿಗೆ ಸೋಂಕು ದೃಢವಾದ ಹಿನ್ನೆಲೆ ವಸತಿ ಶಾಲೆಯನ್ನು ಸೀಲ್​ಡೌನ್ ಮಾಡಲಾಗಿದೆ.

ಸೋಂಕಿತ ವಿದ್ಯಾರ್ಥಿನಿಯರನ್ನು ಕೋವಿಡ್​ ಕೇರ್ ಸೆಂಟರ್​ಗೆ ದಾಖಲಿಸಿದ್ದು, ಉಳಿದ ವಿದ್ಯಾರ್ಥಿನಿಯರನ್ನು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ರಾಜ್ಯ ಸರ್ಕಾರ ಟೆಸ್ಟಿಂಗ್ ಹೆಚ್ಚಳ ಮಾಡಲು ಆದೇಶಿಸಿದ ಹಿನ್ನೆಲೆ ಧಾರವಾಡದ ಎಲ್ಲಾ ಹಾಸ್ಟೆಲ್​ಗಳಲ್ಲಿ ಕೋವಿಡ್​ ಪರೀಕ್ಷೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತ ಇಲಾಖೆಯ ಮೆಟ್ರಿಕ್​ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಇಂದು ಪರೀಕ್ಷೆ ನಡೆಸಿದಾಗ 13 ವಿದ್ಯಾರ್ಥಿನಿಯರಲ್ಲಿ ಕೊರೊನಾ ಪತ್ತೆಯಾಗಿದೆ. ಕ್ವಾರಂಟೈನ್​ ಆದ ವಿದ್ಯಾರ್ಥಿಗಳು ವಸತಿ ನಿಲಯ ಬಿಡದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ: 68 ಬಾಲಕಿಯರು, 10 ಸಿಬ್ಬಂದಿಗೆ ಸೋಂಕು ದೃಢ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.