ಧಾರವಾಡ: ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಡೀ ದೇಶ ಲಾಕ್ಡೌನ್ ಪರಿಸ್ಥಿತಿಯಲ್ಲಿದೆ. ಈ ಹಿನ್ನೆಲೆ ತಮ್ಮ ಮಕ್ಕಳಿಗೆ ತಾವೇ ಸ್ವತಃ ಹೇರ್ ಕಟಿಂಗ್ ಮಾಡುವ ಮೂಲಕ ಜಿಲ್ಲೆಯ ವ್ಯಕ್ತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ.
ಧಾರವಾಡದ ಕೆಲಗೇರಿ ಗಾಯತ್ರಿಪುರ ನಿವಾಸಿಯೊಬ್ಬರು ಮಕ್ಕಳಿಗೆ ತಾನೇ ಸ್ವತಃ ಕ್ಷೌರ ಮಾಡುವ ಮೂಲಕ ಲಾಕ್ಡೌನ್ ಆದೇಶವನ್ನು ಪಾಲಿಸುತ್ತಿದ್ದಾರೆ. ಹೇರ್ ಕಟಿಂಗ್ ಅಂಗಡಿಗಳು ಬಂದ್ ಆಗಿರುವ ಕಾರಣ ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ವೈರಸ್ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ.