ಧಾರವಾಡ: ಇಂದಿನಿಂದ ಅಂಗನವಾಡಿ, ಎಲ್.ಕೆ.ಜಿ ಹಾಗೂ ಯುಕೆಜಿ ತರಗತಿಗಳು ಆರಂಭಗೊಂಡಿವೆ. ಈ ಹಿನ್ನೆಲೆ ರಾಜೀವಗಾಂಧಿ ನಗರದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಭೇಟಿ ನೀಡಿ, ಹೂವು ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.
ಅಂಗನವಾಡಿ ಕೇಂದ್ರದ ಸಿಬ್ಬಂದಿ ಆರತಿ ಬೆಳಗುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು. ನಂತರ ಜಿಲ್ಲಾಧಿಕಾರಿ, ಪೋಷಕರು ಹಾಗೂ ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಾಲಿಕೆ ಸದಸ್ಯರೊಂದಿಗೆ ಮಕ್ಕಳಿಗೆ ನೀಡುವ ಆಹಾರ, ಅಂಗನವಾಡಿ ಕೇಂದ್ರದ ಸೌಲಭ್ಯಗಳು ಹಾಗೂ ಮಕ್ಕಳ ಕಲಿಕೆಯ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಲಕ್ಷ್ಮಿ ಹಿಂಡಸಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ.ಎಚ್.ಎಚ್. ಕುಕನೂರ, ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿ ಡಾ.ಕಮಲಾ ಬೈಲೂರ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಾಹಿರಾಬಾನು, ಅಂಗನವಾಡಿ ಕಾರ್ಯಕರ್ತೆ ಸುವರ್ಣಾ ಪಾಣಿಗಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.