ಧಾರವಾಡ: ಜಿಲ್ಲೆಯಾದ್ಯಂತ ಕೊರೊನಾ ತಡೆಗಟ್ಟುವ ಹಿನ್ನೆಲೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಶನಿವಾರ ಹಾಗೂ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಮೇ 22ರ ಬೆಳಗ್ಗೆ 6 ಗಂಟೆಯಿಂದ 24 ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದಾರೆ. ಸಾರ್ವಜನಿಕರ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ನಿರ್ಬಂಧ ಹೇರಲಾಗಿದೆ.

ಮೇ 22 ರಂದು ಮತ್ತು 23 ರಂದು ಹಣ್ಣು, ತರಕಾರಿ, ಹಾಲು ಮಾರಾಟ ಕೇಂದ್ರಗಳಿಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದೆ.
ಸರ್ಕಾರಿ ಮತ್ತು ಕೋವಿಡ್ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಅಂತ್ಯ ಸಂಸ್ಕಾರಕ್ಕೆ 5 ಜನರು ಭಾಗವಹಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.