ETV Bharat / city

ನಾಳೆ ಸಂಪೂರ್ಣ ಲಾಕ್​ಡೌನ್: ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ - Dharwad people not followed the social distance in market

ನಾಳೆ ಸಂಪೂರ್ಣವಾಗಿ ಧಾರವಾಡ ಜಿಲ್ಲೆ ಸ್ತಬ್ಧವಾಗಲಿದ್ದು, ಸೆಕ್ಷನ್ ​144 ಜಾರಿಯಲ್ಲಿರಲಿದೆ. ಈ ಹಿನ್ನೆಲೆ ಇಂದೇ ಜನರು ಸಾಮಾಜಿಕ ಅಂತರ ಮರೆತು ತರಕಾರಿ ಖರೀದಿಸುತ್ತಿರುವ ದೃಶ್ಯ ಧಾರವಾಡ ಮಾರುಕಟ್ಟೆಯಲ್ಲಿ ಕಂಡು ಬಂತು.

Dharwad people not followed the social distance in market
ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ
author img

By

Published : May 23, 2020, 1:27 PM IST

ಧಾರವಾಡ: ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್​ಡೌನ್ 4.O ಜಾರಿಯಲ್ಲಿದ್ದು ಕೊಂಚ ಸಡಿಲಿಕೆ ಮಾಡಲಾಗಿದೆ. ಪ್ರತಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಆದೇಶ ಹೊರಡಿಸಿದ ಹಿನ್ನೆಲೆ ಇಂದು ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸದೇ ಮಾರುಕಟ್ಟೆಯಲ್ಲಿ ಜನರು ತರಕಾರಿ ಖರೀದಿಸುತ್ತಿರುವ ದೃಶ್ಯ ಕಂಡು ಬಂತು.

ಧಾರವಾಡ ಮಾರುಕಟ್ಟೆಯಲ್ಲಿ ಜನಜಂಗುಳಿ

ನಾಳೆ ಸಂಪೂರ್ಣವಾಗಿ ಧಾರವಾಡ ಜಿಲ್ಲೆ ಸ್ತಬ್ಧವಾಗಲಿದ್ದು, ಜಿಲ್ಲೆಯಲ್ಲಿ ಸೆಕ್ಷನ್​ 144 ಜಾರಿಯಲ್ಲಿರಲಿದೆ. ಇಂದು ಸಂಜೆ 7 ಗಂಟೆಯಿಂದ ನಾಳೆ ಸಂಜೆ 7 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಆದೇಶ ಹೊರಡಿಸಿದ್ದು, ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.

ಇನ್ನು ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಪಾಲಿಸದೆ ಹಾಗೂ ಮಾಸ್ಕ್ ಧರಿಸದೆ ಜನರು ಆಗಮಿಸಿದ್ದಾರೆ. ಧಾರವಾಡದ ಮಾರುಕಟ್ಟೆ ಜನದಟ್ಟಣೆಯಿಂದ ಕೂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.