ETV Bharat / city

ಸಾರಿಗೆ ನೌಕರರ ಮುಷ್ಕರ: 20ಕ್ಕೂ ಹೆಚ್ಚು ಸಿಬ್ಬಂದಿ ಪೊಲೀಸರ ವಶಕ್ಕೆ

author img

By

Published : Apr 20, 2021, 4:32 PM IST

ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಪಿ.ಹೆಚ್.‌ನೀರಲಕೇರಿ ನೇತೃತ್ವದಲ್ಲಿ 'ಜೈಲು ಭರೋ ಚಳುವಳಿ' ಹಮ್ಮಿಕೊಳ್ಳಲಾಗಿತ್ತು. ಕೋವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆ 20ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

dharwad-police-taken-20-transport-staff-into-custody
ಸಾರಿಗೆ ನೌಕರರ ಮುಷ್ಕರ

ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ

ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಪಿ.ಹೆಚ್.‌ನೀರಲಕೇರಿ ನೇತೃತ್ವದಲ್ಲಿ 'ಜೈಲು ಭರೋ ಚಳುವಳಿ' ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಕೊರೊನಾ ನಿಯಮ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಪೊಲೀಸರು ಸೂಚನೆ ನೀಡಿದ್ದರು. ಸೂಚನೆ ಮೀರಿ ಪ್ರತಿಭಟನೆ ನಡೆಸಿದ ಪರಿಣಾಮ ನೌಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಾರಿಗೆ ನೌಕರರು, ತಮ್ಮ ಮೇಲಿನ ದೌರ್ಜನ್ಯ ನಿಲ್ಲಿಸಿ, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.