ಹುಬ್ಬಳ್ಳಿ: ಮದುವೆ ಮನೆಯಲ್ಲಿ ಚಿನ್ನದ ಸರ ಹಾಗೂ ಮೊಬೈಲ್ ಕದ್ದು ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಡಿಪ್ಲೊಮಾ ವಿದ್ಯಾರ್ಥಿವೋರ್ವನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ವಿದ್ಯಾರ್ಥಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನವನು ಎಂದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಾಲೇಜ್ ವೊಂದರಲ್ಲಿ ಈತ ಡಿಪ್ಲೊಮಾ ಓದುತ್ತಿದ್ದು, ಆರೋಪಿಯಿಂದ ಚಿನ್ನದ ಮಾಂಗಲ್ಯ ಸರ ಹಾಗೂ ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮುರಗೋಡ ಪಟ್ಟಣದ ಮದುವೆ ಸಮಾರಂಭದಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಕದ್ದ ವಸ್ತುವನ್ನು ಮಾರಾಟ ಮಾಡಲು ರಮೇಶ ಭವನದ ಬಳಿ ಚಿನ್ನಾಭರಣದ ಅಂಗಡಿ ಹುಡುಕುತ್ತಿದ್ದ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆತನನ್ನು ಹಿಡಿದು ವಿಚಾರಿಸಿದಾಗ ಕಳ್ಳತನ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.