ಹುಬ್ಬಳ್ಳಿ: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರ್ವೆ ಮಾಡುತಿದ್ದ ಆಶಾ ಕಾರ್ಯಕರ್ತರ ಕೈಯಲ್ಲಿರುವ ಕಡತಗಳನ್ನು ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಹುಬ್ಬಳ್ಳಿಯ ಗೌಳಿ ಗಲ್ಲಿಯಲ್ಲಿ ನಡೆದಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ಸರ್ವೆ ಮಾಡಲು ಆಗಮಿಸಿದ ಆಶಾ ಕಾರ್ಯಕರ್ತೆಯರಿಗೆ ಗೌಳಿ ಗಲ್ಲಿಯ ಕೆಲವರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ದಾಖಲೆಗಳನ್ನು ಕಸಿದುಕೊಂಡು ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಾಗವೇಣಿ ಪಾನಗಲ್, ಲತಾ ಶ್ರೀರಾಮ ಎಂಬುವ ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪುಂಡಾಟ ಎಸಗಿದ್ದಾರೆ.
ನಮ್ಮ ಜಮಾತ್‌ನಲ್ಲಿ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಸ್ಥಳಕ್ಕೆ ಶಹರ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.