ETV Bharat / city

ನನ್ನ ರಾಜಕೀಯ ಜೀವನದಲ್ಲಿ ಬಿಜೆಪಿಯಂತಹ ಬ್ರಹ್ಮಾಂಡ ಭ್ರಷ್ಟ ಸರ್ಕಾರ ನೋಡಿಲ್ಲ: ಡಿಕೆಶಿ - DK Shivakumar slams against bjp

ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಬೆಜೆಪಿಯಂತಹ ಬ್ರಹ್ಮಾಂಡ ಭ್ರಷ್ಟಾಚಾರ ಸರ್ಕಾರ ನೋಡಿಲ್ಲ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ತಯಾರಿ ಮಾಡಿಕೊಳ್ಳಿ ಎಂದು ಯತ್ನಾಳ್​ ಹೇಳಿದ್ದಾರೆ. ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಕೂಡಲೇ ಮುಖ್ಯಮಂತ್ರಿಗಳು ತನಿಖೆಗೆ ಸೂಚನೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ..

ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
author img

By

Published : May 7, 2022, 12:13 PM IST

ಹುಬ್ಬಳ್ಳಿ : ಬಿಜೆಪಿ ಸರ್ಕಾರ ಹುಟ್ಟಿದ್ದೇ ಶಾಸಕರ ಖರೀದಿಯಿಂದ. ಇದೀಗ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ದೆಹಲಿಯಿಂದ ಯಾರೋ ಬಂದು ತಮ್ಮನ್ನು ಭೇಟಿಯಾಗಿದ್ದರು. ₹2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಮಾಡಲಾಗುವುದು, ಸಿದ್ಧತೆ ಮಾಡಿಕೊಳ್ಳಿ ಎಂದಿದ್ದರು ಅಂತಾ ಯತ್ನಾಳ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಇಡೀ ಆಡಳಿತ ವ್ಯವಸ್ಥೆಯನ್ನೇ ಅಣಕಿಸುತ್ತಿದೆ. ಕೂಡಲೇ ಸರ್ಕಾರ ಅವರನ್ನು ಹಾಗೂ ಅವರ ಹಿಂದಿರುವವರನ್ನ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದರು.

ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಬ್ರಹ್ಮಾಂಡ ಭ್ರಷ್ಟಾಚಾರ ನೋಡಿಲ್ಲ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ತಯಾರಿ ಮಾಡಿಕೊಳ್ಳಿ ಎಂದು ಯತ್ನಾಳ್​ ಹೇಳಿದ್ದಾರೆ. ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಹಾಗಾಗಿ, ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದರೆ, ಅವರ ಪಕ್ಷದ ಗೌರವವನ್ನು ಉಳಿಸಿಕೊಳ್ಳುವ ಉದ್ದೇಶವಿದ್ದರೆ ಕೂಡಲೇ ತನಿಖೆಗೆ ಸೂಚನೆ ನೀಡಲಿ ಎಂದರು.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿರುವುದು..

ಈಗಾಗಲೇ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದರ ಬಗ್ಗೆ ರಾಜ್ಯದ ಜನತೆ ಚರ್ಚೆ ಮಾಡುವಂತಾಗಿದೆ. ಗುತ್ತಿಗೆದಾರರಿಂದ ಶೇ.40 ಕಮಿಷನ್, ಸರ್ಕಾರಿ ನೌಕರಿಯ ನೇಮಕಾತಿಯಲ್ಲಿ ಕಮಿಷನ್ ದಂಧೆ, ಹೀಗೆ ಬೆಲೆ ನಿಗದಿ ಮಾಡಿದ್ದಾರೆ. ಇದೀಗ ಮಂತ್ರಿ ಮಾಡಲು ಸಹಿತ ದರ ನಿಗದಿ ಮಾಡಿರುವುದು ಶೋಚನೀಯ ಎಂದರು.

ರಾಜ್ಯದ ಮುಖ್ಯಮಂತ್ರಿಗಳು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುತ್ತಾ ಇದ್ದಾರೆ. ಸಂವಿಧಾನ ಸುಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಹರಿಹಾಯ್ದ ಅವರು, ಕೂಡಲೇ ಶಾಸಕ ಬಸನಗೌಡ ಯತ್ನಾಳ್​ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು. ಅಲ್ಲದೇ ಇದರ ಹಿಂದೆ ಯಾರು ಯಾರು ಭಾಗಿಯಾಗಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಸಂಪುಟ ವಿಸ್ತರಣೆ.. ವರಿಷ್ಠರಿಂದ ಬುಲಾವ್ ಬರುತ್ತಿದ್ದಂತೆ ದೆಹಲಿಗೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.