ಧಾರವಾಡ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಾಜಶೇಖರ ಪತ್ತಾರ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಧಾರವಾಡ ಹೊಸ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.
ಬಳಿಕ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೃಗಾಲಯಗಳ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್