ಧಾರವಾಡ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಧಾರವಾಡದ ನಾಲ್ವರು ಆಯ್ಕೆಗೊಂಡಿದ್ದಾರೆ. ಜಾನಪದ, ವೈದ್ಯಕೀಯ, ಶಿಕ್ಷಣ ಕ್ಷೇತ್ರ ಸೇರಿದಂತೆ ನಾಲ್ಕು ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.
ಜಾನಪದ ಕ್ಷೇತ್ರದಲ್ಲಿ ವೆಂಕಪ್ಪ ಗೋವಿಂದಪ್ಪ ಭಜಂತ್ರಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ವ್ಯಾಸ ದೇಶಪಾಂಡೆ ಹಾಗೂ ಎಸ್.ಆರ್. ರಾಮನಗೌಡರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶ್ರೀಧರ ಚಕ್ರವರ್ತಿ ಆಯ್ಕೆಯಾಗಿದ್ದಾರೆ.
ಧಾರವಾಡದಲ್ಲಿರುವ ವೈದ್ಯ ಡಾ. ಎಸ್.ಆರ್. ರಾಮನಗೌಡರ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದೆ.
ಪ್ರಶಸ್ತಿಗೆ ಹೆಸರು ಘೋಷಣೆ ಆಗ್ತಿದ್ದಂತೆಯೇ ಈ ಬಗ್ಗೆ ಮಾಹಿತಿ ಪಡೆದ ಧಾರವಾಡದ ಜನರು, ರಾಮನಗೌಡರ ಮನೆಗೆ ಆಗಮಿಸಿ ಶುಭ ಹಾರೈಸುತ್ತಿದ್ದಾರೆ. ಅವರ ಕುಟುಂಭಸ್ಥರು ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿದ ಸರ್ಕಾರಕ್ಕೆ ರಾಮನಗೌಡರ ಅವರು ಧನ್ಯವಾದ ತಿಳಿಸಿದ್ದಾರೆ.