ಹುಬ್ಬಳ್ಳಿ: ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನದ ಅರ್ಹತೆ ಇರುವವರು ಬಹಳ ಜನ ಇದ್ದಾರೆ. ಯಾರು ಬೇಕಾದರು ಸಿಎಂ ಆಗಬಹುದು. ಆದರೆ ಸದ್ಯಕ್ಕೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿರುವಾಗ ಈ ಬಗ್ಗೆ ಚರ್ಚೆ ಅನಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಸಿಎಂ ಸ್ಥಾನದ ವಿಚಾರವಾಗಿ ಸಿದ್ಧರಾಮಯ್ಯ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದರು. ನಾವೆಲ್ಲರೂ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದ್ದೇವೆ. ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಈ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.
ಶೋಭಾ ಕರಂದ್ಲಾಜೆ ಬಳೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಹಿಳೆಯಾಗಿ ಶೋಭಾ ಕರಂದ್ಲಾಜೆ ಅವರು ಬಳೆ ತೊಟ್ಟ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ.
ಕೀಳುಮಟ್ಟದ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದರು.