ಹುಬ್ಬಳ್ಳಿ: ಇಲ್ಲಿರುವ ಸರ್ಕಾರಿ ಕಚೇರಿಗೆ ಸಾರ್ವಜನಿಕರು ಕೈಯಲ್ಲಿ ಟಾರ್ಚ್ ಹಿಡಿದೇ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರಿ ಕಚೇರಿಯಲ್ಲಿ ಕಳೆದ 7 ದಿನಗಳಿಂದ ಕರೆಂಟ್ ಇಲ್ಲದೇ ಇರುವುದೇ ಇದಕ್ಕೆ ಕಾರಣ. ಅಧಿಕಾರಿಗಳು ಕೆಲಸದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಹಾಗು, ಸಾರ್ವಜನಿಕರು ಕೆಲಸಕ್ಕಾಗಿ ಕಚೇರಿಗೆ ಬಂದಾಗ ಕರೆಂಟ್ ಇಲ್ಲ ಎಂದು ಹೇಳಿ ವಾಪಸ್ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಿನಿ ವಿಧಾನಸೌಧದಲ್ಲಿರುವ ಭೂಮಾಪನ ಇಲಾಖೆ ಕಚೇರಿಯಲ್ಲಿ ಕಳೆದೊಂದು ವಾರದಿಂದ ಕರೆಂಟ್ ಇಲ್ಲ. ಹೀಗಾಗಿ ಅಧಿಕಾರಿಗಳು ಹಾಗು ಸಿಬ್ಬಂದಿ ಕತ್ತಲಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಕಚೇರಿಗೆ ಬರುವ ಸಾರ್ವಜನಿಕರು ಕೈಯಲ್ಲಿ ಟಾರ್ಚ್ ಹಿಡಿದುಕೊಂಡೇ ಒಳಗೆ ಬರಬೇಕು. ಇಲ್ಲವಾದಲ್ಲಿ ಕಚೇರಿಯಲ್ಲಿ ಯಾರು, ಎಲ್ಲಿದ್ದಾರೆ ಎಂದು ಗೊತ್ತಾಗುವುದಿಲ್ಲ. ಅಷ್ಟರಮಟ್ಟಿಗೆ ಬೆಳಕಿನ ಸಮಸ್ಯೆ ಇದೆ. ಈ ಬಗ್ಗೆ ಸಂಬಂಧಪಟ್ಟವರು ಯಾಕೆ ಗಮನ ಹರಿಸುತ್ತಿಲ್ಲ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.